Thursday, May 14, 2026
Thursday, May 14, 2026

ವಿಶ್ವ ವಿಕಲಾಂಗರ ದಿನ ಇರಲಿ ಅವರತ್ತ ನಮ್ಮ ಗಮನ

Date:

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯ 47/3 ಮೂಲಕ 1992 ರಲ್ಲಿ ಅಂಗವಿಕಲ ವ್ಯಕ್ತಿಗಳ ಅಂತರಾಷ್ಟ್ರೀಯ ದಿನದ ವಾರ್ಷಿಕ ಆಚರಣೆಯನ್ನು ಘೋಷಿಸಲಾಯಿತು.

ಈ ದಿನದ ಆಚರಣೆಯು ಅಂಗವೈಕಲ್ಯ ಸಮಸ್ಯೆಗಳ ತಿಳುವಳಿಕೆಯನ್ನು ಉತ್ತೇಜಿಸಲು ಮತ್ತು ವಿಕಲಾಂಗ ವ್ಯಕ್ತಿಗಳ ಘನತೆ, ಹಕ್ಕುಗಳು ಮತ್ತು ಯೋಗಕ್ಷೇಮಕ್ಕಾಗಿ ಬೆಂಬಲವನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ.

ಅಂಗವಿಕಲರು ಕೂಡಾ ಮನುಷ್ಯರೇ. ಅವರಿಗೂ ಭಾವನೆಗಳಿವೆ. ಜಗತ್ತಿನ ಆಗುಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮರ್ಥ್ಯವಿದೆ. ಆದರೆ ಬಹುತೇಕ ಸಂದರ್ಭಗಳಲ್ಲಿ ಅವರನ್ನು ಪ್ರತ್ಯೇಕವಾಗಿ ಪರಿಗಣಿಸುವ ಪರಿಪಾಠವೂ ಕೆಲವೆಡೆ ಕಾಣಿಸುತ್ತಿದೆ.

ಅಥವಾ ಕೆಲವೆಡೆ ಅವರಿಗೆ ಇನ್ನಿಲ್ಲದ ಅನುಕಂಪ ತೋರುವುದು ಇದೆ. ಇದು ತಪ್ಪು. ಅಂಗವಿಕಲರಿಗೂ ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ಅವರು ಸಮಾಜದ ಮುಖ್ಯವಾಹಿನಿಗಳಲ್ಲಿ ಗುರುತಿಸಿಕೊಳ್ಳಬಲ್ಲರು. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷ ಣಿಕ, ಮಾಹಿತಿ ತಂತ್ರಜ್ಞಾನ, ಮನೊರಂಜನೆ ಮುಂತಾದ ಕ್ಷೇತ್ರದಲ್ಲಿ ಗುರುತಿಸಬಲ್ಲರು. ವಿಶೇಷವಾದ ಸಾಧನೆಯನ್ನು ಮಾಡಬಲ್ಲರು. ಸಮಾಜದಲ್ಲಿ ಅವರ ಮಹತ್ವ ಜನರಿಗೆ ಗೊತ್ತಾಗಬೇಕು ಎಂಬ ಉದ್ದೇಶದಿಂದಲೇ ವರ್ಷದ ಒಂದು ದಿನವನ್ನು ಅವರಿಗಾಗಿ ಮೀಸಲಾಗಿರಿಸಲಾಗಿದೆ.

ಅದುವೇ ಡಿಸೆಂಬರ್‌ 3. ಇದು ಜಗತ್ತಿನೆಲ್ಲೆಡೆ ವಿಶ್ವ ಅಂಗವಿಕಲ ದಿನವನ್ನಾಗಿ ಆಚರಿಸಲಾಗುತ್ತದೆ.

ಪ್ರತಿ ವರ್ಷ ಈ ದಿನವನ್ನು ವಿವಿಧ ಥೀಮ್‌ಗಳಡಿಯಲ್ಲಿ ಆಚರಿಸಲಾಗುತ್ತದೆ. ಅಂಗವಿಕಲರಿಗೂ ಸಮಾಜದ ಇತರ ವ್ಯಕ್ತಿಗಳಂತೆ ಸಮಾನವಾದ ಅವಕಾಶಗಳು ಸಿಗಬೇಕು‌. ಅವರಿಗೆ ಯೋಗ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬುದೇ ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ.

ಅಂಗವಿಕಲರ ಸ್ವಾವಲಂಬಿ ಬದುಕಿಗಾಗಿ ಹೊಸ ತಾಂತ್ರಿಕ ಆವಿಷ್ಕಾರಗಳು ನಡೆಯುತ್ತಲೇ ಇವೆ. ಪಾರ್ಶ್ವವಾಯು ಮತ್ತು ಬೆನ್ನುಹುರಿ ಸಮಸ್ಯೆಯಿಂದ ಕಾಲುಗಳಲ್ಲಿ ಸ್ವಾಧೀನ ಕಳೆದುಕೊಂಡವರಿಗೆ ಕೇವಲ ಗಾಲಿಕುರ್ಚಿಗಳೇ ಆಶ್ರಯವಾಗಿತ್ತು. ಇದೀಗ ಅವುಗಳನ್ನು ವಾಕರ್‌ ರೀತಿಯಲ್ಲಿ ಬಳಕೆ ಮಾಡಿಕೊಂಡು ಎಲೆಕ್ಟ್ರಿಕಲ್‌ ಸ್ಟಿಮ್ಯೂಲೇಶನ್‌ ತಂತ್ರಜ್ಞಾನದ ಮೂಲಕ ಸುಲಭವಾಗಿ ನಡೆಯಬಹುದು. ಈ ಸಾಧನದ ಮೂಲಕ ನರಗಳಿಗೆ ಮತ್ತು ಕಾಲಿನ ಮೂಳೆಗಳಿಗೆ ಶಕ್ತಿ ತುಂಬಲಾಗುತ್ತದೆ. ಹೀಗೆ ವಿವಿಧ ಬಗೆಯ ಎಲೆಕ್ಟ್ರಾನಿಕ್ ಉತ್ಪನ್ನಗಳು ಅಂಗವಿಕಲರಿಗೆ ನೆರವಾಗುತ್ತಿವೆ. ಅಂಗವಿಕಲು ಎನ್ನುವುದಕ್ಕಿಂತ ವಿಕಲಚೇತನರು ಎಂದು ಅವರನ್ನು ಕರೆಯುವುದು ಸೂಕ್ತವೆನಿಸುತ್ತದೆ. ವಿಕಲಚೇತನರಿಗೆ ಅನುಕಂಪದ ಬದಲಾಗಿ ಅವಕಾಶಗಳನ್ನು ನೀಡಿದ್ದಲ್ಲಿ ಅವರು ಇನ್ನಷ್ಟು ಸಾಧನೆಗಳನ್ನು ಮಾಡಲು ಸಾಧ್ಯವಾಗುತ್ತದೆ.
ಎಲ್ಲಾ ವಿಕಲಚೇತನರು ಆತ್ಮ ವಿಶ್ವಾಸದಿಂದ ಎಲ್ಲಾ ನೋವು, ಅವಮಾನಗಳನ್ನು ಮೆಟ್ಟಿ ನಿಂತು ಸಮಾಜಕ್ಕೆ ಆದರ್ಶವಾಗಲಿ ಎಂದು ಹಾರೈಸೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...