Sunday, August 23, 2026
Sunday, August 23, 2026

ರಾಜ್ಯಮಟ್ಟದ ಸಮಾವೇಶದಲ್ಲಿ ಉದ್ಯಮಿಗಳಾದ ರುದ್ರೇಗೌಡರು ಮತ್ತು ಅಶ್ವತ್ಥನಾರಾಯಣ ಶೆಟ್ಟರಿಗೆ ಸನ್ಮಾನ

Date:

ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಕಲಬುರಗಿಯಲ್ಲಿ ಆಯೋಜಿಸಿದ್ದ “ಉತ್ತರ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ರಾಜ್ಯಮಟ್ಟದ ಸಮ್ಮೇಳನದಲ್ಲಿ” ವಿಧಾನ ಪರಿಷತ್ ಶಾಸಕ ಎಸ್.ರುದ್ರೇಗೌಡ ಹಾಗೂ ಟಿ.ಆರ್.ಅಶ್ವತ್ಥ ನಾರಾಯಣಶೆಟ್ಟಿ ಅವರಿಗೆ ಸನ್ಮಾನಿಸಲಾಯಿತು.

ಉತ್ತರ ಕರ್ನಾಟಕ ವ್ಯಾಪ್ತಿಯ ರಾಜ್ಯ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಎಸ್.ರುದ್ರೇಗೌಡ ಅವರಿಗೆ ಪ್ರಖ್ಯಾತ ಕೈಗಾರಿಕೋದ್ಯಮಿ ಹಾಗೂ ಟಿ.ಆರ್.ಅಶ್ವತ್ಥ್ ನಾರಾಯಣಶೆಟ್ಟಿ ಅವರಿಗೆ ಪ್ರಖ್ಯಾತ ವರ್ತಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಟ್ಟಿಮನಿ ಸಂಸ್ಥಾನ ಹಿರೇಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉತ್ತರ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ರಾಜ್ಯಮಟ್ಟದ ಸಮ್ಮೇಳನವನ್ನು ಸಂಸದ ಭಗವಂತ್ ಕೂಬಾ ಉದ್ಘಾಟಿಸಿದರು. ಕಲಬುರಗಿ ವಿಧಾನ ಪರಿಷತ್ ಶಾಸಕ ಬಿ.ಜಿ.ಪಾಟೀಲ್ ಹಾಗೂ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಶಾಂತ್ ಎಸ್.ಮಾನಕರ್ ಮಾತನಾಡಿ, ಉತ್ತರ ಕರ್ನಾಟಕದ ಉದ್ಯಮಿಗಳು ಹಾಗೂ ವರ್ತಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಹಾಗೂ ಟ್ರೇಡ್ ಲೈಸೆನ್ಸ್ ಸಮಸ್ಯೆ ಪರಿಹರಿಸಿಕೊಡುವಂತೆ ಮನವಿ ಮಾಡಿದರು. ಕಲ್ಯಾಣ ಕರ್ನಾಟಕ ಭಾಗಕ್ಕೆ ಟೆಕ್ಸ್‌ ಟೈಲ್‌ ಪಾರ್ಕ್ ಸ್ಥಾಪಿಸುವಂತೆ ಸಂಸದ ಭಗವಂತ್ ಖುಬಾ ಅವರ ಗಮನಕ್ಕೆ ತಂದರು.

ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಶರಣಬಸಪ್ಪ ಎಸ್.ಪಪ್ಪ, ಮಹಾದೇವ ವಿ ಖೇಣಿ, ಉಪಾಧ್ಯಕ್ಷರು, ಎಂ.ಸಿ. ಸದಸ್ಯರು, ಕಲ್ಯಾಣ ಕರ್ನಾಟಕದ ಉದ್ಯಮಿಗಳು, ವರ್ತಕರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಪ್ರತಿನಿಧಿಗಳು ಆಗಮಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...