Sunday, December 7, 2025
Sunday, December 7, 2025

ಜನವರಿ 5 ರಂದು ಅಂತಿಮವಾಗಿ ಮತದಾರರ ಪಟ್ಟಿ ಪ್ರಕಟಣೆ- ಡಾ.ಸೆಲ್ವಮಣಿ

Date:

ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು ಹೊಸದಾಗಿ 25,426 ಅರ್ಜಿಗಳು ಬಂದಿದ್ದು, 2023 ರ ಜನವರಿ 05 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಹೇಳಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷದವರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, 2023 ರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಲು (ನಮೂನೆ 6) 25426 ಅರ್ಜಿಗಳು ಅರ್ಜಿ ಬಂದಿವೆ.

18 ಮತ್ತು 19 ವರ್ಷದ 10,667 ಯುವ ಮತದಾರರ ಅರ್ಜಿಗಳು ಬಂದಿವೆ. ನಮೂನೆ 7 ರಲ್ಲಿ ಮರಣ, ವಿಳಾಸ ಬದಲಾವಣೆ, ಸ್ಥಳ ಬದಲಾವಣೆಗೆ ಸಂಬಂಧಿಸಿದ 17,229 ಅರ್ಜಿಗಳು ಬಂದಿವೆ.

ನವೆಂಬರ್ 09 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ನ.09 ರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ಅವುಗಳ ಪರಿಶೀಲನೆ ನಡೆಸಲಾಗುತ್ತಿದೆ.

ಡಿಸೆಂಬರ್ 26 ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಮಾಡಿ, ಜನವರಿ 05 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಹಾಗೂ ಚುನಾವಣೆ ಘೋಷಣೆಯಾಗಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಅಂತಿಮ ದಿನದವರೆಗೆ ಮತದಾರರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದರು.

ಜಿಲ್ಲೆಯ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 247 ಮತಗಟ್ಟೆಗಳು, ಭದ್ರಾವತಿಯಲ್ಲಿ 253, ಶಿವಮೊಗ್ಗ 282, ತೀರ್ಥಹಳ್ಳಿ 258, ಶಿಕಾರಿಪುರ 232, ಸೊರಬ 239 ಮತ್ತು ಸಾಗರ 264 ಒಟ್ಟು 1775 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೆ ಒಬ್ಬರಂತೆ 1775 ಮತಗಟ್ಟೆ ಅಧಿಕಾರಿ(ಬಿಎಲ್‍ಓ)ಗಳನ್ನು ನೇಮಿಸಲಾಗಿದೆ. ಶೇ.83.1 ರಷ್ಟು ಮತದಾರರ ಚೀಟಿಗೆ ಆಧಾರ್ ಲಿಂಕ್ ಆಗಿದೆ.

ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದವರು ಒಟ್ಟು 1773, ರಾಷ್ಟ್ರೀಯ ಕಾಂಗ್ರೆಸ್ ಪಕ್ಷ 1632 ಮತ್ತು ಜೆಡಿಎಸ್ ಪಕ್ಷದವರು 1270 ಮತಗಟ್ಟೆ ಏಜೆಂಟ್ (ಬಿಎಲ್‍ಎ) ಗಳನ್ನು ನೇಮಿಸಿದ್ದಾರೆ. ಜೆಡಿಎಸ್ ನವರು ಭದ್ರಾವತಿ ಮತ್ತು ತೀರ್ಥಹಳ್ಳಿಯಲ್ಲಿ ಬಿಎಲ್‍ಎಗಳನ್ನು ನೇಮಿಸಬೇಕಿದೆ ಎಂದರು.

ರಾಜಕೀಯ ಪಕ್ಷದ ಮುಖಂಡರು ಮತದಾರರ ಪಟ್ಟಿಗೆ ಹೊಸ ಸೇರ್ಪಡೆಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದರು.

ಸಭೆಯಲ್ಲಿ ಇಂಡಿಯನ್ ನ್ಯಾನಷನಲ್ ಕಾಂಗ್ರೆಸ್ ಪಕ್ಷದ ಚಂದನ್ ಎಂ., ಭಾರತೀಯ ಜನತಾ ಪಾರ್ಟಿಯ ಪ್ರಭಾಕರ್ ಎಂ, ವಿನ್ಸೆಂಟ್ ರೋಡ್ರಿಗಸ್, ಜೆಡಿಎಸ್ ನ ಹೆಚ್ ತ್ಯಾಗರಾಜ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಚುನಾವಣಾ ತಹಶೀಲ್ದಾರ್ ಮಂಜುಳಾ ಭಜಂತ್ರಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...