ಮೂಡುಬಿದಿರೆ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಶಿವಮೊಗ್ಗ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕವು ಆಕರ್ಷಕ ಬ್ಯಾಂಡ್ ಪ್ರದರ್ಶನ ನೀಡಿತು.
ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲೆಯ ವಿದ್ಯಾರ್ಥಿಗಳು ಮುಖ್ಯ ವೇದಿಕೆಯಲ್ಲಿ ಬ್ಯಾಂಡ್ ಪ್ರದರ್ಶನವನ್ನು ಅತ್ತ್ಯುತ್ತಮವಾಗಿ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿದರು.
ಶಿವಮೊಗ್ಗ ಜಿಲ್ಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಒಳ್ಳೆಯ ಹೆಸರು ತಂದಿದ್ದಾರೆ.
ಮೂಡುಬಿದಿರೆ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ದೇಶ ವಿದೇಶ ಹಾಗೂ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾವಿರಕ್ಕೂ ಅಧಿಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಹ ಪಾಲ್ಗೊಂಡಿದ್ದಾರೆ.
ಎಲ್ಲರಿಗೂ ಊಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರಿಗೂ ವಿವಿಧ ಕೌಂಟರ್‌ಗಳನ್ನು ತೆರೆಯಲಾಗಿತ್ತು. ಎಲ್ಲ ವೇದಿಕೆಗಳಲ್ಲೂ ಅಚ್ಚುಕಟ್ಟಾಗಿ ಕಾರ್ಯಕ್ರಮಗಳು ಮೂಡಿಬರುತ್ತಿದ್ದವು.
ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕಲಾವಿದರ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿವೆ. ಸ್ವಯಂ ಸೇವಕರು ಉತ್ತಮವಾಗಿ ಎಲ್ಲ ವ್ಯವಸ್ಥೆಯನ್ನು ನಿರ್ವಹಿಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತ ಎಚ್.ಡಿ.ರಮೇಶಶಾಸ್ತ್ರೀ, ಆಯುಕ್ತ ಜಿ.ವಿಜಯಕುಮಾರ್, ಜಾಂಬೂರಿಯ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನಾಯಕರಾದ ಎಚ್.ಶಿವಶಂಕರ್, ವೈ.ಆರ್.ವೀರೇಶಪ್ಪ, ರಾಜೇಶ ಅವಲಕ್ಕಿ, ಎಂಎಲ್ ಸಿ ಮೋಹನ್ ಕೊಂಡಜ್ಜಿ, ಮಂಜುಳಾ, ಬಸವಣ್ಣಪ್ಪ, ಜ್ಯೋತಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಭಾರತಿ ಡಯಾಸ್, ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲಾ ಕಾಲೇಜಿನ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಜಾಂಬೂರಿಯಲ್ಲಿ ಪಾಲ್ಗೊಂಡಿದ್ದರು.