ಮೂಡುಬಿದಿರೆ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಶಿವಮೊಗ್ಗ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರಿ ಅವರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಶಿವಮೊಗ್ಗ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಚೇರಿ ವತಿಯಿಂದ 10 ಲಕ್ಷ ರೂ. ದೇಣಿಗೆ ನೀಡಲಾಗಿತ್ತು. 1500ಕ್ಕೂ ಮಕ್ಕಳು ಶಿವಮೊಗ್ಗ ಜಿಲ್ಲೆಯಿಂದ ಜಾಂಬೂರಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಾಂಬೂರಿ ಯಶಸ್ವಿಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಧಾನ ಆಯುಕ್ತ ಎಚ್.ಡಿ.ರಮೇಶ ಶಾಸ್ತ್ರಿ ಹಾಗೂ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಣೆ ಮತ್ತು ಜಾಂಬೂರಿ ಯಶಸ್ವಿಯಾಗುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಎಚ್.ಡಿ.ರಮೇಶ ಶಾಸ್ತ್ರಿ ಅವರನ್ನು ಅಂತರಾಷ್ಟ್ರೀಯ ಜಾಂಬೂರಿ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಶಾಖೆಯಿಂದ ರಾಜ್ಯ ಪ್ರಧಾನ ಆಯುಕ್ತ, ಮಾಜಿ ಗೃಹಮಂತ್ರಿ ಪಿಜಿಆರ್ ಸಿಂಧ್ಯಾ ಹಾಗೂ ಎಂಎಲ್‌ಸಿ ಮೋಹನ್ ಕೊಂಡಜ್ಜಿ ಅವರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.
ಶಿವಮೊಗ್ಗ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರ ಎಲ್ಲ ಸಂದರ್ಭಗಳಲ್ಲಿ ನಿರಂತರವಾಗಿರಬೇಕು ಎಂದು ಸಿಂಧ್ಯಾ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ವಿವಿಧ ಶಾಲೆಯ ವಿದ್ಯಾರ್ಥಿಗಳು ಜಾಂಬೂರಿಯಲ್ಲಿ ಭಾಗವಹಿಸಿ ಬ್ಯಾಂಡ್ ಪ್ರದರ್ಶನವನ್ನು ಉತ್ತಮವಾಗಿ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದರು.
ಶಿವಮೊಗ್ಗದ ವಿದ್ಯಾರ್ಥಿಗಳು ಜಾಂಬೂರಿಯ ವಿವಿಧ ವೇದಿಕೆಗಳಲ್ಲಿ ಸ್ವಯಂ ಸೇವಕರಾಗಿ ಅತ್ತ್ಯುತ್ತಮ ಸೇವೆ ಸಲ್ಲಿಸಿದರು.
ಆಯುಕ್ತರಾದ ಜಿ.ವಿಜಯ್‌ಕುಮಾರ್, ರಾಜೇಶ್ ಅವಲಕ್ಕಿ, ಭಾರತಿ ಡಯಾಸ್, ವೈ.ಆರ್.ವೀರೇಶಪ್ಪ, ಶಿವಶಂಕರ್, ಕಾತ್ಯಾಯಿನಿ, ಜ್ಯೋತಿ, ಚೂಡಾಮಣಿ ಪವಾರ್, ಶಕುಂತಲ ಚಂದ್ರಶೇಖರ್, ಪರಮೇಶ್ವರ್, ಕೆ.ಪಿ.ಬಿಂದುಕುಮಾರ್, ದೀಪು, ಮಲ್ಲಿಕಾರ್ಜುನ್, ಪದಾಧಿಕಾರಿಗಳು ಉಪಸ್ಥಿತರಿದ್ದರು.