ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಈಗಾಗಲೇ ಮಾರ್ಗಸೂಚಿ ಹೊರಡಿಸಿ ಒಂದಷ್ಟು ನಿಯಮಗಳನ್ನು ವಿಧಿಸಿರುವ ಸರ್ಕಾರ ಇದೀಗ ಹೊಸ ಆದೇಶವನ್ನು ಹೊರಡಿಸಿದೆ. ಹೊಸ ವರ್ಷದ ಮುನ್ನಾ ದಿನವೇ ಈ ಆದೇಶ ಹೊರಬಿದ್ದಿದೆ.
ಕೊರೋನಾಗೆ ಸಂಬಂಧಿಸಿದಂತೆ ಹೈ-ರಿಸ್ಕ್ ಎನಿಸಿಕೊಂಡಿರುವ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನ್ವಯಿಸುವಂತೆ ಈ ಆದೇಶ ಹೊರಡಿಸಲಾಗಿದೆ.
ಅಂದರೆ, ಹೈ-ರಿಸ್ಕ್ ದೇಶಗಳಿಂದ ಬರುವ ವಿಮಾನ ಪ್ರಯಾಣಿಕರು ಕಡ್ಡಾಯವಾಗಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ಆದೇಶಿಸಲಾಗಿದೆ.
ಚೀನಾ, ಹಾಂಗ್‌ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಥಾಯ್ಲೆಂಡ್‌ನಿಂದ ಬರುವ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ.
ವಿಮಾನನಿಲ್ದಾಣದಲ್ಲೇ ಕೊರೋನಾ ಪರೀಕ್ಷೆಗೆ ಒಳಪಡಿಸಲಿದೆ. ಸೋಂಕು ದೃಢಪಟ್ಟವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
