ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ನಿಡುವ ಕೆಲಸ ಸಾಹಿತ್ಯ’ ಹಾಗೂ
ಕಾವ್ಯ ಗಾಯನ ಪ್ರಶಸ್ತಿ’ಗೆ ಸವಿತಾ ನಾಗಭೂಷಣ, ಸರಜೂ ಕಾಟ್ಕರ್, ಸೇರಿದಂತೆ ನಾಲ್ವರು ಸಾಧಕರನ್ನು ಆಯ್ಕೆ ಮಾಡಲಾಗಿದೆ.
2021-22ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಶಿವಮೊಗ್ಗದ ಕವಯಿತ್ರಿ ಸವಿತಾ ನಾಗಭೂಷಣ್ ,2022-23ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಶಿವಮೊಗ್ಗದ ಗಾಯಕ ಗರ್ತಿಕೆರೆ ರಾಘಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. 2022-23ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕವಿ ಸರಜೂ ಕಾಟ್ಕರ್ ಆಯ್ಕೆಯಾಗಿದ್ದಾರೆ.
2021 -22ನೇ ಸಾಲಿನ ಕಾವ್ಯ ಗಾಯನ ಪ್ರಶಸ್ತಿಗೆ ಗಾಯಕಿ ಎಂ.ಕೆ. ಜಯಶ್ರೀ, ಅವರನ್ನು ಆಯ್ಕೆ ಮಾಡಲಾಗಿದೆ .
ಪ್ರಶಸ್ತಿಗಳು ತಲಾ 25 ಸಾವಿರ ನಗದು, ಸ್ಮರಣಿಕೆಯನ್ನು ಒಳಗೊಂಡಿವೆ.
ಜ. 5ರಂದು ಮಂಡ್ಯದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ರೇಷ್ಮೆ, ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯನಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.