ಶಿವಮೊಗ್ಗ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2022 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಅಂತರಾಷ್ಟ್ರ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ ಕ್ರೀಡಾಪಟುಗಳಿಗೆ ಸನ್ಮಾನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
2022 ರಿಂದ ಜನವರಿಯಿಂದ ಡಿಸೆಂಬರ್‌ವರೆಗಿನ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಅಂತರಾಷ್ಟ್ರ, ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸ್ಥಾನಗಳಿಸಿದ ಪ್ರತಿಭಾನ್ವಿತ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿಗಳನ್ನು ಪಡೆದು, ಪ್ರಶಸ್ತಿ ಪತ್ರಗಳ ನಕಲುಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ ಯುವ ಸಬಲೀಕ್ರಣ ಮತ್ತು ಕ್ರೀಡಾ ಇಲಾಖೆ ಕಚೇರಿ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿಗೆ ದಿನಾಂಕ: 24-01-2023 ರೊಳಗೆ ಸಲ್ಲಿಸಬಹುದು.
ಈ ಹಿಂದೆ ಜಿಲ್ಲಾಡಳಿತದಿಂದ ನಡೆದ ಕಾರ್ಯಕ್ರಮದಲ್ಲಿ ಈಗಾಗಲೇ ಸನ್ಮಾನಿತರಾದವರು, ಹಿರಿಯ ಕ್ರೀಡಾಪಟುಗಳು(ವೆಟರನ್ಸ್) ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
