ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ, ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಎನ್ ಎಸ್ ಎಸ್ ಶಿಬಿರ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಲಿತ ವಿದ್ಯೆಯ ಮೂಲಕ ಸಮಾಜದಲ್ಲಿನ ನ್ಯೂನ್ಯತೆ ಹೋಗಲಾಡಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಸಮಾಜಮುಖಿ ಯಾಗುವ ನಿಟ್ಟಿನಲ್ಲಿ, ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ಮೂಲಕ ರಾಜ್ಯದಲ್ಲಿ, ಎನ್.ಎಸ್.ಎಸ್ ಸೇವಾ ಚಟುವಟಿಕೆಗಳನ್ನು ಮಾಡಲಾಗುತ್ತಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಶ್ರೀಮತಿ ಜಿ. ಅನುರಾಧ ಹೇಳಿದ್ದಾರೆ.
“ಎನ್ ಎಸ್ ಎಸ್ ಶಿಬಿರಗಳು ಮಾನಸಿಕ, ಬೌದ್ಧಿಕ, ಆಂತರಿಕ ಆರೋಗ್ಯ ನೀಡುತ್ತವೆ” ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಕ್ಷರಿ ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಸ್ವಾಮಿ, ಎನ್ ಎಸ್ ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ, ಡಾ.ಎಚ್.ಎಂ. ವಾಗ್ದೇವಿ, ಡಾ. ಕೆ. ಬಿ. ಧನಂಜಯ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.