Tuesday, December 9, 2025
Tuesday, December 9, 2025

ಆರೋಗ್ಯಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆ ಮಹತ್ತರ ಅಭಿವೃದ್ದಿ ಸಾಧಿಸಿದೆ- ಬಿ.ವೈ.ರಾಘವೇಂದ್ರ

Date:

ಶಿವಮೊಗ್ಗ: ಪ್ರಸ್ತುತ ದಿನಗಳಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಿರುವುದು ಅತ್ಯಂತ ಅವಶ್ಯಕ. ಸಾರ್ವಜನಿಕರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಡಿಸಿಸಿ ಬ್ಯಾಂಕ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಹಯೋಗದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಆಯುಷ್ಮಾನ್ ಭಾರತ್, ಯಶಸ್ವಿನಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮುಖಾಂತರ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಪ್ರಯತ್ನ ನಡೆಸುತ್ತಿವೆ. ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಸಿಗುವಂತಾಗಬೇಕು ಎಂದು ತಿಳಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮಹತ್ತರ ಅಭಿವೃದ್ಧಿ ಕಾರ್ಯಗಳು ಆಗಿದೆ. ಮೂಲಸೌಕರ್ಯ ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ಸೌಲಭ್ಯಗಳು ಶಿವಮೊಗ್ಗ ಜಿಲ್ಲೆಯಲ್ಲಿ ಲಭ್ಯವಿದೆ. ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಕಲ ರೀತಿಯ ನೆರವು ನೀಡಿವೆ ಎಂದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ಎಸ್.ಪಿ.ದಿನೇಶ್ ಮಾತನಾಡಿ, ಕರೊನಾ ಸಂದರ್ಭದಲ್ಲಿ ರಕ್ತದಾನ ಮಾಡಲು ಹಿಂದೇಟು ಹಾಕುತ್ತಿದ್ದರು. ರಕ್ತದ ಕೊರತೆ ಹೆಚ್ಚಾಗಿ ಸಮರ್ಪಕ ಪ್ರಮಾಣದಲ್ಲಿ ರಕ್ತದಾನ ನಡೆದಿರಲಿಲ್ಲ. ರಕ್ತದಾನದಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ರಕ್ತದಾನದ ಬಗ್ಗೆ ಹಿಂಜರಿಕೆ ಪಡದೇ ಆರೋಗ್ಯವಂತ ಯುವಜನರು ರಕ್ತದಾನ ಮಾಡಬೇಕು ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆದ ರಕ್ತದಾನ ಶಿಬಿರಗಳಲ್ಲಿ 600 ಯೂನಿಟ್ ರಕ್ತದಾನ ಸಂಗ್ರಹ ಆಗಿದ್ದು, ಗರಿಷ್ಠ ಆಗಿತ್ತು. ಇದೀಗ ಡಿಸಿಸಿ ಬ್ಯಾಂಕ್‌ನಲ್ಲಿ ಆಯೋಜಿಸಿರುವ ಶಿಬಿರದಲ್ಲಿ ಸಾವಿರಕ್ಕೂ ಅಧಿಕ ಯೂನಿಟ್ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಎಲ್ಲರೂ ನೋಂದಣಿ ಮಾಡಿಸಿಕೊಂಡಿದ್ದಾರೆ. ನೀರಿಕ್ಷಿತ ಯೂನಿಟ್‌ಗಳಷ್ಟು ರಕ್ತ ಸಂಗ್ರಹ ಆಗಲಿದೆ ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ ಮಾತನಾಡಿ, ಬ್ಯಾಂಕ್ ವತಿಯಿಂದ ಆರ್ಥಿಕ ಚಟುವಟಿಕೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಪ್ರಥಮ ಬಾರಿಗೆ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಸಿದ್ದು, ಸಾವಿರಕ್ಕೂ ಅಧಿಕ ಜನರು ರಕ್ತದಾನ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದರು.

ರಕ್ತದಾನ ಮಾಡುವುದರಿಂದ ಜೀವ ಉಳಿಸುವ ಮಹಾತ್ಕಾರ್ಯದಲ್ಲಿ ನಾವೆಲ್ಲರೂ ಭಾಗಿಯಾದ ಪುಣ್ಯ ಸಿಗುತ್ತದೆ. ತುರ್ತು ಸಂದರ್ಭದಲ್ಲಿ ನಾವು ಮಾಡಿದ ರಕ್ತದಾನ ಅವಶ್ಯಕತೆ ಇದ್ದವರ ನೆರವಿಗೆ ಬರುತ್ತದೆ. ಮತ್ತೊಬ್ಬರ ಜೀವ ಉಳಿಯುತ್ತದೆ. ರಕ್ತದಾನ ಮಾಡುವ ಜತೆಯಲ್ಲಿ ಇತರರಿಗೂ ರಕ್ತದಾನ ಮಾಡುವಂತೆ ಪ್ರೇರಣೆ ನೀಡಬೇಕು ಎಂದು ತಿಳಿಸಿದರು.

ರೆಡ್‌ಕ್ರಾಸ್ ಸಂಜೀವಿನಿ ಬ್ಲಡ್ ಬ್ಯಾಂಕ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ಸಾವಿರಕ್ಕೂ ಅಧಿಕ ಜನರು ರಕ್ತದಾನಕ್ಕೆ ನೋಂದಣಿ ಮಾಡಿಸಿದ್ದರು. ಉಪಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಗೌರವ ಕಾರ್ಯದರ್ಶಿ ಡಾ. ದಿನೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಎಲ್.ಷಡಾಕ್ಷರಿ, ಶಿಮುಲ್ ಅಧ್ಯಕ್ಷ ಶ್ರೀಪಾದರಾವ್, ಬೃಹತ್ ರಕ್ತದಾನ ಶಿಬಿರದಲ್ಲಿ ಪ್ರಮುಖರಾದ ವಿಜಯದೇವ್, ಪರಮೇಶ್ವರ್, ಯೋಗೇಶ್, ದುಗ್ಗಪ್ಪ, ಅಶ್ವತ್ಥನಾರಾಯಣ ಶೆಟ್ಟಿ, ಗುರುರಾಜ್, ಕೀರ್ತಿರಾಜ್, ವೆಂಕಟೇಶ್, ದಿವಾಕರಶೆಟ್ಟಿ, ನಾಗೇಶ ಡೋಂಗ್ರೆ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. Colleges ಸಾಗರದ ಎಲ್ .ಬಿ‌.ಕಾಲೇಜಿನ ಮುಖ್ಯದ್ವಾರಕ್ಕೆ ಶಿಲಾನ್ಯಾಸ.

L.B. Colleges ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನೆಡೆಸುತ್ತಿರುವ ಲಾಲ್ ಬಹದ್ದೂರ್ ಕಲಾ,...

Shimoga News ಮಕ್ಕಳು ಉತ್ಸಾಹದ ಚಿಲುಮೆಗಳು.ಉತ್ತಮ ಊಟ ಆಟ ಪಾಠದೊಂದಿಗೆ ಸಮಾಜದ ಅಭಿವೃದ್ಧಿ- ನ್ಯಾ.ಎಂ.ಎಸ್.ಸಂತೋಷ್

Shimoga News ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ...

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...