ರಾಜ್ಯದಲ್ಲಿ ಈಗಾಗಲೇ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಶಿಕ್ಷಣ ಇಲಾಖೆಯು ಸಜ್ಜಾಗಿದೆ.
ಸದ್ಯದಲ್ಲಿಯೇ 2000 ಪ್ರೌಢಶಾಲಾ ಶಿಕ್ಷಕರು ಹಾಗೂ 750 ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುತ್ತದೆ ಎಂದು ಸಾಕ್ಷರತಾ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು,
ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ. ಅದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸಿದ್ಧತೆ ಮತ್ತು ನಿಯಮಾವಳಿ ರೂಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಜನವರಿ ಮೊದಲ ವಾರದಲ್ಲಿ ಶಿವಮೊಗ್ಗದಲ್ಲಿ ಮಾತನಾಡಿದ್ದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಯಡಿಯೂರಪ್ಪ ನೇತೃತ್ವದ ಸರ್ಕಾರ ಇರುವಾಗ ಸುಮಾರು 3 ಸಾವಿರಕ್ಕೂ ಅಧಿಕವಾಗಿ ಶಿಕ್ಷಕರ ನೇಮಕಾತಿ ಮಾಡಲಾಗಿತ್ತು.
ನಂತರ ಸುಮಾರು 13,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಇನ್ನು ಫೆಬ್ರವರಿಯಲ್ಲಿ ಸುಮಾರು 2,500 ಪ್ರೌಢ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ತಿಳಿಸಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.