ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆಯ ವತಿಯಿಂದ 74ನೇ ಗಣರಾಜ್ಯೋತ್ಸವವನ್ನು ಜಿಲ್ಲಾ ಸ್ಕೌಟ್ ಭವನ ಶಿವಮೊಗ್ಗದಲ್ಲಿ ಆಚರಿಸಲಾಯಿತು. ವಿವಿಧ ಶಾಲೆ, ಕಾಲೇಜಿನ ಕಬ್, ಬುಲ್‌ಬುಲ್, ಸ್ಕೌಟ್ಸ್, ಗೈಡ್ಸ್, ರೋರ‍್ಸ್ ಮತ್ತು ರೇಂರ‍್ಸ್ಗಳು ಭಾಗವಹಿಸಿದ್ದರು. ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಹೆಚ್.ಡಿ ರಮೇಶ ಶಾಸ್ತ್ರಿ ರವರು ಧ್ವಜಾರೋಹಣ ನೆರೆವೇರಿಸಿದರು.ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.
ನಂತರದಲ್ಲಿ ಬಾಬಾ ಸಾಹೇಬ್ ಡಾ|| ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಗಣರಾಜ್ಯೋತ್ಸವದ ಮಹತ್ವವನ್ನು ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಹೆಚ್.ಡಿ.ರಮೇಶಶಾಸ್ತಿçರವರು ತಿಳಿಸಿ, ಮಾತನಾಡುತ್ತಾ ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಭಾರತದ ಪ್ರತಿಯೊಬ್ಬ ಪ್ರಜೆಯು ಸಂವಿಧಾನಕ್ಕೆ ಗೌರವಿಸಬೇಕು. ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್‌ರವರ ಆದರ್ಶವನ್ನು ಪಾಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತರು ಶ್ರೀ ಹೆಚ್.ಡಿ ರಮೇಶ ಶಾಸ್ತ್ರಿ ಜಿಲ್ಲಾ ಆಯುಕ್ತರು (ಸ್ಕೌ) ಶ್ರೀ ಕೆ.ಪಿ.ಬಿಂದುಕುಮಾರ್, ಜಿಲ್ಲಾ ಆಯುಕ್ತರು (ಗೈ) ಶ್ರೀಮತಿ ಶಕುಂತಲಾ ಚಂದ್ರಶೇಖರ್, ಜಿಲ್ಲಾ ಖಜಾಂಚಿ ಶ್ರೀ ಚೂಡಾಮಣಿ ಈ ಪವಾರ್, ಜಿಲ್ಲಾ ಕಾರ್ಯದರ್ಶಿ ಶ್ರೀ ಹೆಚ್.ಪರಮೇಶ್ವರ್, ಸಹ ಕಾರ್ಯದರ್ಶಿ ಶ್ರೀ ವೈ.ಆರ್.ವೀರೇಶಪ್ಪ, ಶ್ರೀ ರಾಜೇಶ್ ಅವಲಕ್ಕಿ, ಕೇಂದ್ರ ಸ್ಥಾನಿಕ ಆಯುಕ್ತ (ಸಾರ್ವಜನಿಕ ಸಂಪರ್ಕ) ಶ್ರೀ ಜಿ.ವಿಜಯಕುಮಾರ್, ಶಿವಶಂಕರ್.ಹೆಚ್. , ಕಾತ್ಯಯಿನಿ.ಸಿ.ಎಸ್, ಎಮ್.ಹೇಮಲತ, ಹಾಗೂ ನಗರದ ವಿವಿಧ ಶಾಲೆ, ಕಾಲೇಜಿನ ಸ್ಕೌಟ್ಸ್ ಮತ್ತು ಗೈಡ್ಸ್ ಉಪಸ್ಥಿತರಿದ್ದರು.