ಶಿವಮೊಗ್ಗ: ಭದ್ರಾವತಿ VISL ಕಾರ್ಖಾನೆ ಮುಚ್ಚುವ ಸ್ಥಿತಿಗೆ ಹೋಗುತ್ತಿದೆ. ಅನೇಕ ವರ್ಷಗಳಿಂದ VISL ಹಾಗೂ MPM ಕಾರ್ಖಾನೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮೈಸೂರು ಮಹಾರಾಜರು ಆರಂಭಿಸಿದ VISL ಕಾರ್ಖಾನೆ ಮುಚ್ಚುವ ಸ್ಥಿತಿಗೆ ಹೋಗುತ್ತಿರುವುದು ದುರ್ದೈವ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು.
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಈ ಹಿಂದೆ ಲಾಭದಲ್ಲಿ ನಡೆಯುತ್ತಿದ್ದ ಕಾರ್ಖಾನೆ ಅನೇಕ ವರ್ಷಗಳಿಂದ ನಷ್ಟದ ಸುಲಿಗೆ ಸಿಕ್ಕಿದ್ದೆ ಹೆಚ್ಚು. ಅಂದಿನ ಯುಪಿಎ ಸರ್ಕಾರವು ಸಹ ಸರ್ಕಾರಿ ಸ್ವಾಮ್ಯದ ಸೇಲ್ ಗೆ ವಹಿಸಿ ಕಾರ್ಖಾನೆಗೆ ಜೀವ ತುಂಬಲು ಪ್ರಯತ್ನಿಸಿತ್ತು. ಸಂಸದನಾಗಿ ನಾನು ಸಹ ಎರಡು ಬಾರಿ ಕೇಂದ್ರದ ಸಚಿವರನ್ನು ಭದ್ರಾವತಿಗೆ ಕರೆಸಿ ಅಲ್ಲಿನ ಸ್ಥಿತಿಗತಿಗಳನ್ನು ಮನವರಿಕೆ ಮಾಡಿಕೊಟ್ಟಿದ್ದೆ. ಅವರು ಸಹ ಕಾರ್ಖಾನೆಯ ಅಭಿವೃದ್ಧಿಗೆ ಭರವಸೆ ನೀಡಿದ್ದರು ಸಹ ಸಾಧ್ಯವಾಗಲಿಲ್ಲ. ನರ್ಷದಿಂದ ಪಾರಾಗಲು ಖಾಸಗಿಯವರಿಗೆ ಕಾರ್ಖಾನೆ ವಹಿಸುವ ಪ್ರಯತ್ನವಾಗಿ 2019ರ ಜುಲೈನಲ್ಲಿ ಟೆಂಡರ್ ಕರೆಯಲಾಗಿತ್ತು. ಯಾವುದೇ ಖಾಸಗಿ ಕಂಪನಿಗಳು ಇದಕ್ಕೆ ಆಸಕ್ತಿ ತೋರಲಿಲ್ಲ. ಮತ್ತೊಮ್ಮೆ ಟೆಂಡರ್ ಕರೆದರೂ ಸಹ ಬರಲಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು.
VISL ಗೆ ಬಂಡವಾಳ ಹೂಡಿ ಉತ್ಪಾದನೆಗೆ ಚಾಲನೆ ನೀಡಿದ್ದರೂ ಸಹ ಸಂಪೂರ್ಣವಾಗಿ ನಷ್ಟ ಉಂಟಾಗಿ ಉತ್ಪಾದನೆ ಸ್ಥಗಿತವಾಯಿತು. ಕೇಂದ್ರ ಸರ್ಕಾರ ಬಂಡವಾಳ ಹೂಡುವ ಪರಿಸ್ಥಿತಿ ಇಲ್ಲ. ರಾಜ್ಯ ಸರ್ಕಾರ ಬಂಡವಾಳ ಹೂಡಲು ಇತ್ತೀಚೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಯಿತು. ಶೀಘ್ರದಲ್ಲೇ ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಮಿಕ ಮುಖಂಡರ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಆಸ್ತಿಯಾಗಿರುವ ಈ ಕಾರ್ಖಾನೆ ಮುಚ್ಚುವ ಸ್ಥಿತಿಯಲ್ಲಿದ್ದರೂ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ಬಂದಿದೆ. ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ವಿಮಾನದ ಹಾರಾಟದಿಂದ ಬಂಡವಾಳ ಹೂಡಿಕೆದಾರರು ಕಾರ್ಖಾನೆಗೆ ಬಂಡವಾಳ ಹೂಡಲು ಮುಂದೆ ಬರಬಹುದು ಎಂಬ ಆತ್ಮವಿಶ್ವಾಸವಿದೆ. ಮತ್ತು ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಬಲವಾಗಿರುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಬಿ.ವೈ. ರಾಘವೇಂದ್ರ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ. ಡಿ.ಮೇಘರಾಜ್, ಬಿ.ಕೆ. ಶ್ರೀನಾಥ್, ಎಸ್ ಎನ್ ಚನ್ನಬಸಪ್ಪ, ಶಿವರಾಜ್, ಚಂದ್ರಶೇಖರ್, ಕೆ .ವಿ. ಅಣ್ಣಪ್ಪ, ಧರ್ಮ ಪ್ರಸಾದ್, ರಮೇಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.