Thursday, October 3, 2024
Thursday, October 3, 2024

ಚಿಕ್ಕಮಗಳೂರಿನಲ್ಲಿ ಬೀದಿನಾಯಿ ನಿಯಂತ್ರಣಕ್ಕೆ ಜೆಡಿಎಸ್ ನಗರ ಸಭಾಸದಸ್ಯರ ಒತ್ತಾಯ

Date:

ಚಿಕ್ಕಮಗಳೂರು ನಗರದ ಶರೀಫ್‌ಗಲ್ಲಿಯ ಬಾಲಕಿಯ ಮೇಲೆ ಬೀದಿನಾಯಿಗಳ ಗುಂಪೊಂದು ದಾಳಿ ನಡೆಸಿರುವ ಪರಿಣಾಮ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು ಈ ಸಂಬಂಧ ಜೆಡಿಎಸ್ ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ ಆಸ್ಪತ್ರೆಗೆ ಭೇಟಿ ನೀಡಿ ಐದು ಸಾವಿರ ಧನಸಹಾಯ ಹಾಗೂ ಹಣ್ಣು-ಹಂಪಲು ವಿತರಿಸಿ ಸಾಂತ್ವಾನ ಹೇಳಿದರು.

ಈ ವೇಳೆ ಮಾತನಾಡಿದ ಎ.ಸಿ.ಕುಮಾರಗೌಡ ಬೀದಿನಾಯಿಗಳ ಹಾವಳಿಯಿಂದ ಅನೇಕ ಮಕ್ಕಳು, ವೃದ್ದರು ಹಾನಿಗೊಳಗಾಗುತ್ತಿದ್ದು ಇವುಗಳನ್ನು ನಿಯಂತ್ರಣಕ್ಕೆ ನಗರಸಭಾ ಆಡಳಿತ ಮಂಡಳಿಯು ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದರಿಂದ ಸಾರ್ವಜನಿಕರಿಗೆ ತೀವ್ರ ಕಿರಿಕಿರಿಯಾಗುತ್ತಿದೆ ಎಂದರು.

ಕಳೆದ ನಾಲ್ಕು ತಿಂಗಳ ಹಿಂದೆಯೇ ನಗರಸಭಾ ಸಾಮಾನ್ಯ ಸಭೆಯಲ್ಲಿ ಬೀದಿನಾಯಿಗಳ ಸಂತಾನ ಹರಣ ಚಿಕಿತ್ಸೆ ಹಾಗೂ ನಿಯಂತ್ರಿಸುವ ಸಲುವಾಗಿ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಆದರೆ ಆಡಳಿತ ಮಂಡಳಿಯು ಬೀದಿನಾಯಿಗಳಿಂದ ಮಕ್ಕಳ ಹಾಗೂ ವೃದ್ದರನ್ನು ರಕ್ಷಿಸಲು ಗಂಭೀರವಾಗಿ ಪರಿಗಣಿಸದೇ ಕಾಟಾಚಾರಕ್ಕೆ ತೀರ್ಮಾನ ಕೈಗೊಂಡು ಮುಂದೂಡುತ್ತಾ ಬಂದಿದೆ ಎಂದು ದೂರಿದರು.

ಇದೀಗ ಬೀದಿನಾಯಿಗಳ ಕಡಿತದಿಂದ ಅಸ್ವಸ್ಥರಾಗಿರುವ ಬಾಲಕಿಗೆ ಏಳು ವರ್ಷಗಳು ತುಂಬಿದೆ. ಮುಖ, ಕೈಕಾಲು ಸೇರಿದಂತೆ ಅನೇಕ ಭಾಗಗಳಲ್ಲಿ ಕಚ್ಚಿರುವ ಪರಿಣಾಮ ಮುಂದಿನ ಬೆಳವಣಿಗೆಯಲ್ಲಿ ಆ ಮಗುವಿನ ಸುಂದರ ಮೊಗವು ವಿರೂಪಗೊಳ್ಳುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ರೀತಿ ನಗರದ ಬಹುತೇಕ ವಾರ್ಡ್ಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಿದೆ. ಇದುವರೆಗೂ 20-30 ಮಕ್ಕಳಿಗೆ ಕಚ್ಚಿರುವ ಪ್ರಕರಣ ವರದಿಯಾಗಿವೆ.

ಇದನ್ನು ಗಮನಿಸಿ ನಗರಸಭಾ ಪೌರಾಯುಕ್ತರಿಗೆ ಅನೇಕ ಬಾರಿ ಅರ್ಜಿ ಸಲ್ಲಿಸಿ ಹಾಗೂ ವಾಟ್ಸಪ್ ಮೂಲಕ ಸಂದೇಶ ರವಾನಿಸಿದರೂ ತಮಗೂ ಇದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮುಂದಿನ ದಿನಗಳಲ್ಲಿ ನಗರಸಭೆಯು ಬೀದಿನಾಯಿಗಳ ನಿಯಂತ್ರಣಕ್ಕೆ ಮುಂಜಾಗ್ರತೆ ಕ್ರಮ ವಹಿಸಬೇಕು. ಇಲ್ಲದಿದ್ದ ಪಕ್ಷದಲ್ಲಿ ನಾಯಿಗಳ ಹಾವಳಿಯಿಂದ ಮಕ್ಕಳಿಗೆ ತೊಂದರೆಯಾದಲ್ಲಿ ಮಗುವಿನ ಚಿಕಿತ್ಸೆಯ ಪೂರ್ಣ ವೆಚ್ಚ ಹಾಗೂ ಮಗುವಿನ ಮುಖವು ಮೊದಲಿನಂತಾಗುವವರೆಗೂ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ತಿಳಿಸಿದರು.

ಬಾಲಕಿಯ ಪೋಷಕರು ಮಾತನಾಡಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಔಷಧಿಗಳು ಆಸ್ಪತ್ರೆಯಲ್ಲಿ ದೊರೆಯದೇ ಹೊರಗಡೆ ತರಲಾಗುತ್ತಿದೆ. ಮೊದಲೇ ಆರ್ಥಿಕ ಸಂಕಷ್ಟದಲ್ಲಿರು ವವರಿಗೆ ಬರೆ ಮೇಲೆ ಬರೆ ಎಳೆಯದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೂಡಲೇ ಮುಂಬರುವ ದಿನಗಳಲ್ಲಿ ಮಕ್ಕಳ ಮೇಲೆ ಯಾವುದೇ ಅವಘಡ ಸಂಭಸುವ ಮೊದಲೇ ನಗರಸಭಾ ಆಡಳಿತ ಮಂಡಳಿ ಹಾಗೂ ಪೌರಾಯುಕ್ತರು ಎಚ್ಚೆತ್ತುಕೊಂಡು ಬೀದಿನಾಯಿಗಳ ಹಾವಳಿಯ ವಿಚಾರವನ್ನು ಸೂಕ್ಷ್ಮವಾಗಿ ಪರಿಗಣಿಸಿ ನಿಯಂತ್ರಿಸುವಲ್ಲಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...