Thursday, July 9, 2026
Thursday, July 9, 2026

karnataka Budget ರಾಜ್ಯ ಬಜೆಟ್ ಪ್ರತಿಕ್ರಿಯೆಗಳು

Date:

ನಿರಾಶಾದಾಯಕ ಬಜೆಟ್ – ಶಿಹಾನ್ ಪಾಶಾ

ಮತದಾರರನ್ನ ಸೆಳೆಯುವ ಪ್ರಯತ್ನ- ಪ್ರೇಮ್ ಕುಮಾರ್

karnataka Budget ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಕೊನೆಯ ಬಜೆಟ್ ಜನಸಾಮಾನ್ಯರ ಅತ್ಯಂತ ನಿರಾಶಾದಾಯಕ ಬಜೆಟ್ ಆಗಿದೆ ಎಂದು ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಶಿಹಾನ್ ಪಾಶ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಬಡವರು, ಕೂಲಿಕಾರ್ಮಿಕರು, ಅಲ್ಪಸಂಖ್ಯಾ ತರು, ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಯಾವುದೇ ಹೊಸತನವನ್ನು ಆಶಾದಾಯಕ ಯೋಜನೆಗಳನ್ನು ರೂಪಿಸಿರುವುದಿಲ್ಲ ಎಂದಿದ್ದಾರೆ.

karnataka Budget ವಕ್ಫ್ ಆಸ್ತಿಗಳ ಅಭಿವೃದ್ದಿ ಹಾಗೂ ನಿರ್ವಹಣೆಗೆ ಯಾವುದೇ ಯೋಜನೆಗಳಿಲ್ಲ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅತೀ ಹೆಚ್ಚು ಮುಖ್ಯವಾದ ವಿಷಯಗಳನ್ನು ನಿರ್ಲಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಸರ್ಕಾರ ರೂಪಿಸಿರುವ ಅಂತಿಮ ಬಜೆಟ್ ಇದಾಗಿದೆ ಎಂದು ಜೆಡಿಎಸ್ ಯುವಜನತಾದಳ ಅಧ್ಯಕ್ಷ ಸಿ.ಹೆಚ್. ಪ್ರೇಮ್‌ಕುಮಾರ್ ಹೇಳಿದ್ದಾರೆ.

ಈ ಕುರಿತು ಹೇಳಿಕೆಯಲ್ಲಿ ತಿಳಿಸಿರುವ ಅವರು ರಾಜ್ಯದ ರೈತಾಪಿ ವರ್ಗ ಹಾಗೂ ಸಾಮಾನ್ಯ ಜನರಿಗೆ ಪೂರಕವಾಗಿರದ ಬೊಮ್ಮಾಯಿ ನೇತೃತ್ವದ ಇಂದಿನ ಬಜೆಟ್ ಎಂದ ಅವರು ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಈ ರೀತಿಯ ಬಜೆಟ್ ರೂಪಿಸಲಾಗಿದ್ದು ಇದು ಎಷ್ಟರ ಮಟ್ಟಿಗೆ ಪ್ರಗತಿ ಸಾಧಿಸಲಿದೆ ಎಂದು ಕಾಣಬೇಕಿದೆ ಎಂದಿದ್ದಾರೆ.

ಇದೇ ರೀತಿಯ ಏಳನೇ ವೇತನ ಆಯೋಗದಲ್ಲಿ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು, ಅಧಿಕಾರಿಗಳ ಆಸೆಗೆ ತಣ್ಣೀರು ಎರಚಿದಂತಾಗಿದೆ ಎಂದು ಹೇಳಿದ್ದಾರೆ.

ರಾಜಕೀಯ ಸದುದ್ದೇಶದಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೊನೆಯ ಬಜೆಟ್‌ನ್ನು ಪೂರ್ಣಗೊಳಿಸಿದ್ದು ಮುಂದಿನ ದಿನಗಳಲ್ಲಿ ಇವರ ಬಜೆಟ್ ಇವರಿಗೆ ಮಾರಕವಾಗಿ ರಾಜ್ಯದಲ್ಲಿ ತೆನೆಹೊತ್ತ ಮಹಿಳೆ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...