Tuesday, March 24, 2026
Tuesday, March 24, 2026

CM Bommayi ಶೀಘ್ರವೇ ರಾಜ್ಯ ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗದ ಶಿಫಾರಸು ಜಾರಿ – ಸೀಎಂ ಬೊಮ್ಮಾಯಿ

Date:

CM Bommayi ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು.

CM Bommayi ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. 7ನೇ ವೇತನ ಆಯೋಗ ಶಿಫಾರಸು ಜಾರಿಗೆ ಅಗತ್ಯವಿರುವ ಹಣ ನೀಡಲಾಗುವುದು ಎಂದು ಗುಲ್ಬರ್ಗ ವಿವಿಯಲ್ಲಿ ಮುಕ್ತಾಯಗೊಂಡ ಕಲ್ಯಾಣ ಕರ್ನಾಟಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಅವಧಿಗೆ ಮೊದಲೇ ವೇತನ ಆಯೋಗ ರಚಿಸಿದ್ದು ಇತಿಹಾಸದಲ್ಲೇ ಇದೇ ಮೊದಲಾಗಿದ್ದು, ಇದು ಮುಖ್ಯಮಂತ್ರಿಗಳು ಮತ್ತು ಸರ್ಕಾರಕ್ಕೆ ಸರ್ಕಾರಿ ನೌಕರರ ಬಗ್ಗೆ ಇರುವ ಕಾಳಜಿಯಾಗಿದೆ ಎಂದು ಹೇಳಿದರು.

ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಮುಷ್ಕರ ನಡೆಸಬಾರದು. ರಾಜ್ಯದ ಜನರ ಹಿತ ದೃಷ್ಟಿಯಿಂದ ಸರ್ಕಾರದೊಂದಿಗೆ ಸಹಕರಿಸಬೇಕು. ನಾನು ನೀಡಿದ ಮಾತಿನಂತೆ 7ನೇ ವೇತನ ಆಯೋಗ ರಚಿಸಿದ್ದು, ನೌಕರರ ಸಂಘದ ಬೇಡಿಕೆ ಈಡೇರಿಸಿದ್ದೇನೆ. ವೇತನ ಆಯೋಗದ ಅಧ್ಯಕ್ಷರು ಮಧ್ಯಂತರ ವರದಿ ನೀಡಿದರೆ ಹಣ ಮೀಸಲಿಡಲು ಸಿದ್ಧವಿದ್ದೇವೆ. ಮೊದಲು ವರದಿ ಬರಲಿ, ನೌಕರರ ಸಂಘದವರು ಸ್ವಲ್ಪ ತಾಳ್ಮೆಯಿಂದ ಇದ್ದರೆ ಎಲ್ಲವೂ ಸರಿಯಾಗುತ್ತದೆ ಎಂದು ಸಿಎಂ ತಿಳಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

India Scouts and Guides ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ

India Scouts and Guides ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು...

B.Y. Raghavendra ಯೋಜನೆಗಳು-ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು : ಬಿ.ವೈ.ರಾಘವೇಂದ್ರ

B.Y. Raghavendra ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ...

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...