Government Employee Strike ಸರ್ಕಾರಿ ನೌಕರರ ಮುಷ್ಕರದಿಂದ ಉಂಟಾಗುತ್ತಿರುವ ಸಾರ್ವಜನಿಕರ ತೊಂದರೆಗೆ ಸರ್ಕಾರವೇ ನೇರ ಕಾರಣ ಎಂದು ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಜಿ.ಮಧುಕುಮಾರ್ ಅವರು ಕಿಡಿ ಕಾರಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಸರ್ಕಾರಿ ನೌಕರರು 7ನೇ ವೇತನ ಆಯೋಗ, ಹಿಂದಿನ ಪಿಂಚಣಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸುತ್ತಿರುವುದು ತಪ್ಪೇನಲ್ಲ. ಆದರೆ, ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ನೌಕರರು ಹಾಗೂ ಸರ್ಕಾರದ ನಡುವಿನ ಹಗ್ಗ ಜಗ್ಗಾಟದಲ್ಲಿ ಜನಸಾಮಾನ್ಯರು ಹೈರಾಣಾಗುತ್ತಿದ್ದಾರೆ ಎಂದು ಮಧು ಬೇಸರ ವ್ಯಕ್ತಪಡಿಸಿದ್ದಾರೆ.
ಪೂರ್ವ ನಿಯೋಜಿತ ಮುಷ್ಕರ ಇದಾಗಿದ್ದರೂ ಸರ್ಕಾರ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ. ಇದರಿಂದ ಜನರು ಪರದಾಡುವಂತಾಗಿದೆ. ಹಲವೆಡೆ ವೃದ್ಧರು, ಮಹಿಳೆಯರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಸರ್ಕಾರಿ ಕಚೇರಿಗಳಲ್ಲಿ ಕಾದು ಕಾದು ಹಿಡಿಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ತಾಲ್ಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ, ಸರ್ಕಾರಿ ಹಾಸ್ಟೆಲ್, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹೀಗೆ ಹಲವೆಡೆ ಜನರು ತತ್ತರಿಸಿ ಹೋಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕು ಕಚೇರಿಗಳಲ್ಲಿ ಸಾಮಾನ್ಯವಾಗಿ ಜಮೀನುಗಳಿಗೆ ಸಂಬಂಧಿಸಿದ ವಿಚಾರಗಳನ್ನು
ಮುಂದಿಟ್ಟು ಕೊಂಡು ತಾಲೂಕಿನ ವಿವಿಧ ಭಾಗಗಳಿಂದ ರೈತರು, ಕೃಷಿ ಕಾರ್ಮಿಕರು ಮತ್ತು ನಾಗರಿಕರು ಆಗಮಿಸಿ ಬರಿಗೈಲಿ ವಾಪಾಸಾಗುತ್ತಿದ್ದಾರೆ.
ಇನ್ನೂ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣಪತ್ರ ಸೇರಿದಂತೆ ತುರ್ತಾಗಿ ಪಡೆಯಬೇಕಾದ ಪ್ರಮಾಣ ಪತ್ರಗಳು ಪಡೆಯಲಾಗದೇ ತೊಂದರೆಗೆ ಸಿಲುಕಿದ್ದಾರೆ ಎಂದಿದ್ದಾರೆ.
Government Employee Strike ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯಗಳನ್ನು 2022 ಜುಲೈ 1ರಿಂದಲೇ ಜಾರಿಗೊಳಿಸಬೇಕಾಗಿತ್ತು. ಆದರೆ ಸರ್ಕಾರ ಇದುವರೆಗೂ ಜಾರಿಗೊಳಿಸಿಲ್ಲ. ಅಲ್ಲದೇ, ರಾಜ್ಯದ 2023-24ನೇ ಸಾಲಿನ ಬಜೆಟ್‍ನಲ್ಲಿ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ. ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿರುವುದೇ ಇಷ್ಟೆಲ್ಲಾ ಅನಾಹುತಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.