Sunday, June 21, 2026
Sunday, June 21, 2026

B.s Yediyurappa ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ನಿಂದ ರಾಜಾಹುಲಿಗೆ ಜನ್ಮದಿನ ಸನ್ಮಾನ

Date:

B.s Yediyurappa  ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ಅಭಿವೃದ್ಧಿ ಹರಿಕಾರ, ರೈತರ ಕಣ್ಮಣಿ, ಜನಪ್ರಿಯ ನಾಯಕ ಬಿ.ಎಸ್.ಮುಖ್ಯಮಂತ್ರಿ ಅವರಿಗೆ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರಾಜ್ಯದ ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕ್ಷಣ, ಆರೋಗ್ಯ, ಉದ್ಯಮ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ.
ಐದು ದಶಕಗಳಿಗೂ ಅಧಿಕ ರಾಜಕೀಯ ಜೀವನದಲ್ಲಿ ಅಧಿಕಾರ ವಹಿಸಿಕೊಂಡಿದ್ದು ಕೆಲವೇ ವರ್ಷಗಳೇ ಆದರೂ ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಉದ್ಯಮಿಗಳು ಸೇರಿದಂತೆ ಎಲ್ಲ ವರ್ಗದ ಜನರಿಗೂ ಉಪಯುಕ್ತವಾಗುವಂತಹ ಜನಪ್ರಿಯ ಯೋಜನೆಗಳ ಅನುಷ್ಠಾನಗೊಳಿಸಿದ್ದರು. ಪೂರ್ಣ ಅವಧಿ ಮುಖ್ಯಮಂತ್ರಿ ಆಗಿದ್ದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿ ನಂಬರ್ 1 ರಾಜ್ಯವಾಗಿ ರೂಪುಗೊಳ್ಳುತ್ತಿತ್ತು ಎಂದು ವಾಣಿಜ್ಯ ಸಂಘದ ಪದಾಧಿಕಾರಿಗಳು ಅನಿಸಿಕೆ ವ್ಯಕ್ತಪಡಿಸಿದರು.

B.s Yediyurappa  ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಸಂಘದ ವತಿಯಿಂದ ಶುಭಾಶಯ ಕೋರಿ ಅಭಿನಂದಿಸಿದರು.
ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಬಿ.ಆರ್.ಸಂತೋಷ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪ್ರದೀಪ್ ಎಲಿ, ಹಾಲಸ್ವಾಮಿ, ಗಣೇಶ್ ಅಂಗಡಿ, ಎಂ.ರಾಜ್, ಜೆ.ಆರ್.ವಾಸುದೇವ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...