Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಬೀದಿನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕಾ ಕಾರ್ಯಕ್ರಮಗಳನ್ನು ಮಾರ್ಚ್ 4ರಿಂದ 6 ತಿಂಗಳವರೆಗೆ ಪ್ರತಿ ಭಾನುವಾರದಂದು ನಗರದ ರಾಜೀವ್‌ಗಾಂಧಿ ಬಡಾವಣೆಯಲ್ಲಿರುವ ಮಹಾವೀರ್ ಗೋಶಾಲೆಯ ಪಕ್ಕದಲ್ಲಿ ಆಯೋಜಿಸಿದೆ.
ಮಾನವೀಯ ಹಾಗೂ ವೈಜ್ಞಾನಿಕ ರೀತಿಯಲ್ಲಿ ಶ್ವಾನಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು, ರೇಬಿಸ್ ಇತ್ಯಾದಿ ಪ್ರಾಣಿ ಜನ್ಯ ರೋಗಗಳಿಂದ ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುವುದು ಹಾಗೂ ಬೀದಿನಾಯಿಗಳಿಂದ ಸಾರ್ವಜನಿಕರಿಗಾಗುವ ತೊಂದರೆಗಳಿಂದ ಮುಕ್ತಗೊಳಿಸುವುದು ಈ ಶಸ್ತ್ರ ಚಿಕಿತ್ಸೆಯ ಉದ್ದೇಶ. ಬೀದಿನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿ ರೇಬಿಸ್ ವಿರುದ್ಧ ಲಸಿಕೆ ಹಾಕಿ ಕಿವಿಗೆ ಗುರುತು ಮಾಡಿ ಕಾರ್ಯಾಚರಣೆ ಪೂರ್ಣವಾದ ನಂತರ ಅವುಗಳನ್ನು ಹಿಡಿದ ಸ್ಥಳಗಳಲ್ಲಿ ಬಿಡಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Shivamogga City Corporation ಹೆಚ್ಚಿನ ಮಾಹಿತಿಗಾಗಿ ಡಾ. ರೇಖಾ ಎಸ್.ಟಿ., ಪಶುವೈದ್ಯಾಧಿಕಾರಿಗಳು, ಮಹಾನಗರ ಪಾಲಿಕೆ- 98863268, ಹಾಗೂ ಬಸವಪ್ರಸಾದ್ (ಎಸ್‌ಎಆರ್‌ಸಿ) -9964239695 ಇವರುಗಳನ್ನು ಸಂಪರ್ಕಿಸಬಹುದು…
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
