Tuesday, October 1, 2024
Tuesday, October 1, 2024

Women’s Day ಹೆಣ್ಣುಮಕ್ಕಳಿಗೆ ವಿಪುಲ ಅವಕಾಶಗಳನ್ನ ಇಂದಿನ ನಮ್ಮ ಪ್ರಜಾಪ್ರಭುತ್ವ ಸಾಧ್ಯಮಾಡಿದೆ- ನ್ಯಾ.ರಾಜಣ್ಣ ಸಂಕಣ್ಣನವರ್

Date:

Women’s Day  ಇಂದಿನ ದಿನದಲ್ಲಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದಕ್ಕೆ ನಮ್ಮ ಪ್ರಜಾಪ್ರಭುತ್ವವೇ ಕಾರಣ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್ ಅಭಿಪ್ರಾಯಪಟ್ಟರು.

ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ವಿಜಯವಾಣಿ ಹಾಗೂ ದಿಗ್ವಿಜಯ ವಾಹಿನಿ ಸಹಯೋಗದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸಂವಿಧಾನದಲ್ಲಿ ಮಹಿಳೆಯರಿಗೆ ವಿಶೇಷವಾದ ಹಕ್ಕುಗಳನ್ನು ಕಲ್ಪಿಸಲಾಗಿದೆ. ಇದರಿಂದ ಮಹಿಳೆಯರಿಗೆ ಸಮಾನ ಅವಕಾಶಗಳು ದೊರೆಯುತ್ತಿವೆ.ದಶಕಗಳ ಹಿಂದೆ ಮಹಿಳೆಯರನ್ನ ನಮ್ಮ ಸಮಾಜ ನಡೆಸಿಕೊಳ್ಳುತ್ತಿದ್ದ ರೀತಿಗೂ ಇಂದಿನ ಸಮಾಜ ಮಹಿಳೆಯರನ್ನ ಕಾಣುವ ರೀತಿಗೂ ಸಾಕಷ್ಟು ಬದಲಾವಣೆಗಳಾಗಿವೆ ಎಂದು ತಿಳಿಸಿದರು.

ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಆಯ್ಕೆಯ ಸಮಸ್ಯೆಗಳು ಸೇರಿದಂತೆ ಪ್ರಸ್ತುತ ಸನ್ನಿವೇಶಗಳ ಬಗ್ಗೆ ಆತ್ಮಾವಲೋಕನ ಮಾಡಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉತ್ತಮ ವೇದಿಕೆ ಎಂದರು.

ನಾವು ಮಹಿಳಾ ದಿನಾಚರಣೆಯ ಒಂದು ದಿನ ಮಾತ್ರ ಮಹಿಳೆಯರಿಗೆ ಪ್ರಾಮುಖ್ಯತೆ ನೀಡುವುದಲ್ಲ. ಪ್ರತಿದಿನವೂ ಮಹಿಳೆಯರನ್ನ ಗೌರವದಿಂದ ಕಾಣುವುದು ಮುಖ್ಯವೆಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹಾಗೂ ಸುರಭಿ ಮಹಿಳಾ ಮಂಡಳಿ ನಿರ್ದೇಶಕಿ ಜಿ.ಎಂ. ರೇಖಾ ಅವರು ತಿಳಿಸಿದರು.

ದೌರ್ಜನ್ಯಕ್ಕೆ ಒಳಗಾದ ಒಬ್ಬ ಮಹಿಳೆಯನ್ನಾದರೂ ಒಂದು ವರ್ಷದಲ್ಲಿ ಸಮಾಜದ ಮುಖ್ಯ ವಾಹಿನಿಗೆ ತರುತ್ತೇವೆ ಎಂದು ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಬೇಕೆಂದರು.

ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕಾಗಿ ಕೌಟುಂಬಿಕ ಸಂಬಂಧಗಳು ಹಾಳಾಗುತ್ತಿವೆ. ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಸಿಕ್ಕು , ಎಲ್ಲ ಇದು ಕೊರಗುವ ಸ್ತ್ರೀಯರೂ ಇದ್ದಾರೆ. ಹಾಗೆಯೇ ಸಮಾಜದಲ್ಲಿ ತಮಗಾಗಿ ಒಂದು ಅವಕಾಶವನ್ನ ಕಲ್ಪಿಸಿಕೊಳ್ಳಬೇಕು ಎಂದುಕೊಳ್ಳುವ ಮಹಿಳೆಯರೂ ಇದ್ದಾರೆ ಎಂದರು.

ಮಹಿಳೆಯರಿಗೆ ಭಾವುಕತೆ ಮತ್ತು ಸೂಕ್ಷ್ಮತೆ ಹೆಚ್ಚು ಎನ್ನುವುದು ನಮಗೆಲ್ಲ ಗೊತ್ತೇ ಇದೆ. ಆದರೆ ಅದನ್ನ ಪರಿಸ್ಥಿತಿಗೆ ಅನುಗುಣವಾಗಿ ಬಳಕೆ ಮಾಡಿಕೊಳ್ಳಬೇಕು. ಮಹಿಳೆಯರಿಗೆ ಭಾವನೆಗಳೇ ಸಾಮರ್ಥ್ಯವಾಗಬೇಕೆಂದು ಕಟೀಲ್ ಅಶೋಕ್ ಪೈ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅವರು ತಿಳಿಸಿದರು.

ದೌರ್ಜನಕ್ಕೆ ಒಳಗಾದ ಮಹಿಳೆಯರನ್ನ ರಕ್ಷಿಸಿ, ಅವರೊಂದಿಗೆ ಸಂವಹನ ನಡೆಸುವುದು ನಿಜಕ್ಕೂ ಕಷ್ಟಕರವಾದ ವಿಷಯ. ಹೆಚ್ಚಿನ ಸಮಯದಲ್ಲಿ ಭಯಪಟ್ಟು ದೌರ್ಜನ್ಯಕ್ಕೋಳಗಾದ ಮಹಿಳೆಯರು ಸುಳ್ಳುಗಳನ್ನೇ ಹೇಳಬಹುದು.. ತಮ್ಮ ಮನಸ್ಸಿನ ಉದ್ವೇಗವನ್ನು ಸಿಟ್ಟಿನ ಮೂಲಕ, ಮೌನವಾಗಿ , ತಿಳಿಸಲು ಇಚ್ಚಿಸುತ್ತಾರೆ. ಅಂತಹ ಸಮಯದಲ್ಲಿ ಅವರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರನ್ನ ಸಂತೈಸುವ ಕೆಲಸ ನಮ್ಮಿಂದಾಗಬೇಕು. ದೌರ್ಜನ್ಯಕ್ಕೆ ಒಳಗಾದವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಬಹಳಷ್ಟು ಕೆಲಸ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

Women’s Day  ಸಂಪನ್ಮೂಲ ವ್ಯಕ್ತಿಗಳೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿ ಪ್ರೋಕ್ಸೋ, ಅಪ್ರಾಪ್ತೆಯರ ಮೇಲಿನ ದೌರ್ಜನ್ಯ,ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತಂತೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಾನಸ ಟ್ರಸ್ಟ್ ನ ಅಧ್ಯಕ್ಷೆ ಡಾ. ರಜನಿ ಪೈ, ಮನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಅರ್ಚನಾ ಭಟ್, ಸ್ನಾತಕೋತ್ತರ ಮನುಶಾಸ್ತ್ರ ವಿಭಾಗದ ಸಮನ್ವಯಕಾರರಾದ ಸಿಸ್ಟರ್ ಮಾರಿಯ ಎವ್ಲಿನ್, ವಿಜಯವಾಣಿ ಶಿವಮೊಗ್ಗ ಆವೃತ್ತಿ ಮುಖ್ಯಸ್ಥ ಎನ್.ಡಿ ಶಾಂತಕುಮಾರ್, ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...