Chikmagalur news ರಾಷ್ಟ್ರೀಯ ಆರೋಗ್ಯದ ಅಭಿಯಾನದಡಿ ಒಳಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಒಳಗುತ್ತಿಗೆ ನೌಕರರು ಶಾಸಕ ಸಿ.ಟಿ.ರವಿ ಅವರಿಗೆ ಸ್ವಗೃಹದಲ್ಲಿ ಶನಿವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಒಳಗುತ್ತಿಗೆ ನೌಕರರಾದ ನಿತ್ಯಾಸ್ಪೂರ್ತಿ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಮಂದಿ ಒಳಗುತ್ತಿಗೆ ನೌಕರರಾಗಿ ಕಳೆದ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಕೋವಿಡ್ ನಂತರ ಮಾರಕ ಕಾಯಿಲೆ ಬಂದಾಗಲೂ ಒಳಗುತ್ತಿಗೆ ನೌಕರರು ತಮ್ಮ ಕರ್ತವ್ಯದ ಜೊತೆ ಸೋಂಕಿತರ ಆರೈಕೆ, ವ್ಯಾಕ್ಸಿನ್ ನೀಡುವ ಜೊತೆಯಲ್ಲಿ ಎಲ್ಲಾ ಸೇವೆಗಳನ್ನು ಮಾಡಲಾಗಿದೆ. ಆದರೂ, ಕೂಡಾ ರಾಜ್ಯ ಸರ್ಕಾರ ನೌಕರರ ಸೇವೆಯನ್ನು ಪರಿಗಣಿಸಿಲ್ಲ. ಸಾರ್ವಜನಿಕ ಆರೋಗ್ಯ ಕಾಪಾಡುವವರ ಬಗ್ಗೆ ಸರ್ಕಾರ ನಿರ್ಲಕ್ಸ್ಯ ವಹಿಸಿದ್ದು ಕೂಡಲೇ ನೌಕರರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
Chikmagalur news ಅಲ್ಪಮೊತ್ತದ ವೇತನದಲ್ಲಿ ಒಳಗುತ್ತಿಗೆ ನೌಕರರು ಕೌಟುಂಬಿಕ ಜೀವನ ನಡೆಸಲು ಕಷ್ಟರಕವಾಗಿದೆ. ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಲಾಗಿದ್ದರೂ ಕೂಡಾ ಯಾವುದೇ ರೀತಿಯ ಪ್ರಯೋಜನವಾಗಿರುವುದಿಲ್ಲ. ಆ ನಿಟ್ಟಿನಲ್ಲಿ ರಾಜ್ಯ ಸಂಘವು ಫೆ.13 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ವನ್ನು ನಡೆಸುತ್ತಿದೆ ಎಂದು ತಿಳಿಸಿದರು.
ಒಡಿಸ್ಸಾ, ರಾಜಸ್ಥಾನ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಸರ್ಕಾರಗಳು ಈಗಾಗಲೇ ಒಳಗುತ್ತಿಗೆ ನೌಕರರನ್ನು ಖಾಯಂಗೊಳಿಸಿವೆ. ಅದೇ ರೀತಿ ರಾಜ್ಯದಲ್ಲೂ ಕೂಡಾ ಒಳಗುತ್ತಿಗೆ ನೌಕರರನ್ನು ಖಾಯಂಗೊಳಿಸಿ ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಒಳಗುತ್ತಿಗೆ ನೌಕರರ ಪದಾಧಿಕಾರಿಗಳಾದ ಚೇತನ್, ಪ್ರೇಮ, ಅಂಜು, ಅಶ್ವಿನಿ, ಗೀತಾ ಮತ್ತಿತರರು ಹಾಜರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.