Social work ತಳಮಟ್ಟದಿಂದಲೂ ಸಾಮಾಜಿಕ ಸೇವೆಗಳನ್ನು ನೀಡುತ್ತಾ ಜನಮಾನಸದಲ್ಲಿ ಗುರುತಿಸಿಕೊಂಡಿರುವ ಲಯನ್ಸ್ ಸಂಸ್ಥೆ ವಿಶ್ವದಲ್ಲಿ ಉತ್ತಮ ಹೆಸರನ್ನು ಸಂಪಾದಿಸಿ ಅಗ್ರಗಣ್ಯ ಪಟ್ಟಿಗೆ ಸೇರ್ಪಡೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಹೇಳಿದರು.
ಚಿಕ್ಕಮಗಳೂರಿನ ಲಯನ್ಸ್ ಸೇವಾ ಭವನದಲ್ಲಿ ನಡೆದ ಲಯನ್ ಪ್ರಾಂತೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಸಮಾಜಕ್ಕೆ ಏನನ್ನಾದರೂ ಕೊಡಬೇಕು ಎಂದು ಯೋಚಿಸಿದಾಗ ಮಾತ್ರ ಸೇವೆ ಮಾಡಲು ಸಾಧ್ಯ. ಅಂತಹ ಸೇವಾಕಾರ್ಯವನ್ನು ಲಯನ್ಸ್ ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ. ಆರೋಗ್ಯ ಹಾಗೂ ಕೃಷಿ ಸೇರಿದಂತೆ ವಿವಿಧ ವಲಯಗಳಲ್ಲಿ ಲಯನ್ಸ್ ಕ್ಲಬ್ ಅತ್ಯುತ್ತಮ ಕಾರ್ಯಕ್ರಮವನ್ನು ರೂಪಿಸಿ ಜನಪರವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
Social work ಉದಾತ್ತ ಸಾಮಾಜಿಕ ಸೇವೆಗಾಗಿ ಗುರುತಿಸಿಕೊಂಡಿರುವ ಲಯನ್ಸ್ ಸಂಸ್ಥೆ ಅಧಿಕಾರ, ಅಂತಸ್ತು, ನಾಮಫಲಕಗಳಿಗೆ ಸೀಮಿತಗೊಳ್ಳದೆ ನಿಸ್ವಾರ್ಥ ಸೇವೆಯ ಮೂಲಕ ಸಮಾಜದ ವಿಶ್ವಾಸವನ್ನು ಗಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ ಯಾವುದೇ ಸಂಘ ಸಂಸ್ಥೆಯಾಗಿರಲಿ ನಿಸ್ವಾರ್ಥ ಸೇವಾ ಗುಣ, ಮನೋಭಾವದಿಂದ ಕೆಲಸ ಮಾಡಿದಲ್ಲಿ ಸಮಾಜದ ಏಳ್ಗೆಯಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲರು ಶ್ರಮಿಸಬೇಕು ಎಂದು ಹೇಳಿದರು.
ಸಮ್ಮೇಳನದ 3ರ ಪ್ರಾಂತೀಯ ಅಧ್ಯಕ್ಷ ಜೆ.ಎನ್.ಜೆ.ಲೋಬೋ ಮಾತನಾಡಿ ಚಿಕ್ಕಮಗಳೂರಿನಲ್ಲಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಸಮಾಜದಲ್ಲಿ ಗಮನ ಸೆಳೆದಿದ್ದಾರೆ. ಇತಿಹಾಸದಲ್ಲಿ ಲಯನ್ಸ್ ಪ್ರಾಂತೀಯ ಸಮ್ಮೇಳನ ಒಂದು ಐತಿಹಾಸಿಕ ದಾಖಲೆ ಹಾಗೂ ಸಮ್ಮೇಳನ ಯಶಸ್ಸಿಗೆ ಶ್ರಮಿಸಿದ ಎಲ್ಲರನ್ನು ಅಭಿನಂದಿಸಿದರು.
ಪಿಎಂಜೆಎಫ್ ಜಿಲ್ಲಾ ರಾಜ್ಯಪಾಲ 317-ಡಿ ಸಂಜಿತ್‌ಶೆಟ್ಟಿ ಅಭಿನಂದನಾ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಪ್ರಾಂತೀಯ ಮೊದಲ ಮಹಿಳೆ ಎಲಿಜಿಬಿತ್ ಲಿವಿನ್ ಡಿಕುನ್ನ, ಪ್ರಾಂತೀಯ ಸಮ್ಮೇಳನ ಸಮಿತಿ ಅಧ್ಯಕ್ಷ ಶಶಿಪ್ರಸಾದ್, ಕಾರ್ಯದರ್ಶಿ ಸಿಜು, ಖಜಾಂಚಿ ಗೋಪಾಲಗೌಡ, ಅತಿಥೇಯ ಕ್ಲಬ್ ಅಧ್ಯಕ್ಷ ಲಕ್ಷ್ಮಣಗೌಡ, ಲಯನ್ಸ್ ಕ್ಲಬ್ ಜಿಲ್ಲಾಧ್ಯಕ್ಷ ವೆಂಕಟೇಶ್ ಹಾಗೂ ಜಿಲ್ಲೆ 317-ಡಿ ಎಲ್ಲಾ ಅಧ್ಯಕ್ಷರು, ವಲಯ ದೂತರು, ವಲಯ ಅಧ್ಯಕ್ಷರುಗಳು, ಪ್ರಾಂತೀಯ ಅಧ್ಯಕ್ಷರುಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.