Chikmagalur ಗಿರಿಜನ ಇಲಾಖೆಯಿಂದ ಆಯ್ಕೆ ಮಾಡುವ ಪರಿಶಿಷ್ಟ ಪಂಗಡದ ಪ್ರತಿಭಾ ವಂತ ಬಡ ವಿದ್ಯಾರ್ಥಿಗಳಿಗೆ ಚಿಕ್ಕಮಗಳೂರು ತಾಲ್ಲೂಕಿನ ಸೆಂಟ್ ಮೇರಿಸ್ ಮತ್ತು ಸಾಯಿ ಏಂಜಲ್ಸ್ ಶಾಲೆಯಲ್ಲಿ ಪ್ರಸ್ತಕ ಸಾಲಿನಿಂದ ವಿದ್ಯಾಭ್ಯಾಸಕ್ಕೆ ಸೇರ್ಪಡೆಗೊಳಿಸಿ ಅನುಕೂಲ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಮಹರ್ಷಿ ವಾಲ್ಮೀಕಿ ನಾಯಕರ ಯುವಕರ ಸಂಘವು ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಈ ಸಂಬಂಧ ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರಿಗೆ ಗುರುವಾರ ಮನವಿ ಸಲ್ಲಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ಗಿರಿಜನ ಯೋಜನಾ ಅಭಿವೃದ್ದಿ ಇಲಾಖೆ ವತಿಯಿಂದ ಪ.ಪಂಗಡದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು.
ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡುವ ಪ್ರತಿಷ್ಟಿತ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲು ತಾಲ್ಲೂಕಿನ ಶಾಲೆಗಳಾದ ಸೆಂಟ್ ಮೇರಿಸ್ ಮತ್ತು ಸಾಯಿ ಏಂಜಲ್ಸ್ ಶಾಲೆಗಳನ್ನು ಈ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಪ.ಪಂ ಗಡದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
Chikmagalur ಆದ್ದರಿಂದ ಕೂಡಲೇ ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಈ ಎರಡು ಪ್ರತಿಷ್ಟಿತ ಶಾಲೆಗಳನ್ನು 2023-24ನೇ ಪ್ರಸಕ್ತ ಸಾಲಿನಿಂದ ಸೇರಿಸುವ ಮೂಲಕ ಪ.ಪಂಗಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡ ಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಎಂ.ಮಧುಕುಮಾರ್, ಗೌರವಾಧ್ಯಕ್ಷ ಜಗದೀಶ್ ಪ್ರಸಾದ್, ತಾಲ್ಲೂಕು ಅಧ್ಯಕ್ಷ ಬಿ.ಆರ್.ಪ್ರದೀಪ್, ಗೌರವಾಧ್ಯಕ್ಷ ವಿಜಯಕುಮಾರ್ ಮತ್ತಿತರರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.