Rahul Gandhi ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ 2019ರಲ್ಲಿ ದಾಖಲಾದ ಮಾನನಷ್ಟ ಮುಖದ ಮೇಲೆ ಎರಡು ವರ್ಷಗಳ ಜೈಲು ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಈ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಇದು ರಾಹುಲ್ ಗಾಂಧಿಯೊಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯದ ಪ್ರಶ್ನೆ ಅಲ್ಲ. ಇದು ಇಡೀ ದೇಶದ ಜನತೆಗೆ ಸಂಬಂಧಿಸಿದ್ದು. ಸರ್ಕಾರದ ವಿರುದ್ಧ ಮಾತನಾಡಿದವರ ಮೇಲೆ ನೂರಾರು ಸುಳ್ಳು ಪ್ರಕರಣಗಳನ್ನು ಬಿಜೆಪಿ ಸರ್ಕಾರ ದಾಖಲಿಸುತ್ತಿದೆ. ಇಂದು ರಾಹುಲ್ ಗಾಂಧಿ, ನಾಳೆ ನಾವು ಕೂಡ ಆಗಬಹುದು… ಎಚ್ಚರ…!
ಸೂರತ್ ಸೆಷನ್ಸ್ ನ್ಯಾಯಾಲಯದ ತೀರ್ಪು ಅಂತಿಮ ಅಲ್ಲ, ಮೇಲಿನ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ಭರವಸೆ ನಮಗಿದೆ.
Rahul Gandhi ಸುಳ್ಳು ಪ್ರಚಾರ, ಪೊಳ್ಳು ಬೆದರಿಕೆಗಳು ಹೇಡಿಗಳ ಲಕ್ಷಣ. ಇದರಿಂದಾಗಿ ತಲೆ ತಗ್ಗಿಸುವ ಪ್ರಶ್ನೆಯೇ ಇಲ್ಲ. ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ಅಂತಿಮ ಗೆಲುವು ನಮ್ಮದೇ ಆಗಿರುತ್ತದೆ.
ಸತ್ಯವನ್ನು ಹೇಳಿ ಜನಜಾಗೃತಿಗೊಳಿಸುತ್ತಿರುವ ನಮ್ಮ ನಾಯಕರಾದ
ರಾಹುಲ್ ಗಾಂಧಿ
ಅವರ ದನಿಯನ್ನು ಸುಳ್ಳು ಮೊಕದ್ದಮೆಗಳು ಮತ್ತು ಮಾಧ್ಯಮಗಳ ಮೂಲಕ ನಡೆಸುವ ಅಪಪ್ರಚಾರದಿಂದ ಉಡುಗಿಸಲಾಗದು. ರಾಹುಲ್ ಗಾಂಧಿಯವರ ಜೊತೆ ಇಡೀ ದೇಶ ಇದೆ ಎಂದು ತಮ್ಮ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.