ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಕನಕದಾಸರ 534ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
“ಕನಕದಾಸರು ಜಾತ್ಯಾತೀತ ಮನೋಭಾವ ಬಿತ್ತುವ ಮೂಲಕ ವಿಶ್ವ ಮಾನವತೆಯನ್ನು ಸಾರಿದ ಮಹನೀಯರಾಗಿದ್ದಾರೆ” ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.
ಕನ್ನಡ ಸಾಹಿತ್ಯದ ನಾನಾ ಪ್ರಕಾರಗಳಲ್ಲಿ ದಾಸ ಸಾಹಿತ್ಯಕ್ಕೆ ಮಹತ್ವದ ಸ್ಥಾನವಿದೆ. ದಾಸ ಶ್ರೇಷ್ಠರು ಎಂಬ ಪದಕ್ಕೆ ಅನ್ವರ್ಥವಾಗಿದ್ದ ಕನಕದಾಸರು ಎಲ್ಲಾ ವರ್ಗಗಳ ಜನರಿಗೂ ಆದರ್ಶಪ್ರಾಯ. ಸಮಾಜದ ಮೇಲ್ವರ್ಗ ಹಾಗೂ ತಳಸಮುದಾಯಗಳ ವೈರುಧ್ಯಗಳನ್ನು ತಮ್ಮ ಕೃತಿಗಳಲ್ಲಿ ಪ್ರತಿಪಾದಿಸಿರುವ ಕನಕದಾಸರ ಚಿಂತನೆಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಉಪವಿಭಾಗಾಧಿಕಾರಿ ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ಕುರುಬ ಸಮಾಜದ ಮುಖಂಡರಾದ ನವುಲೆ ಈಶ್ವರಪ್ಪ, ಕೆ. ರಂಗನಾಥ್, ವೇಣುಗೋಪಾಲ್ ಇನ್ನಿತರರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.