Saturday, November 23, 2024
Saturday, November 23, 2024

KPSC Exam 2023 ಕೆಪಿಎಸ್ ಸಿ ಸಾಂಖ್ಯಿಕ ಮತ್ತು ಕಾರ್ಮಿಕ ಇಲಾಖೆಯ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಗೆ ಪೂರ್ವ ಸಿದ್ಧತೆ

Date:

KPSC Exam 2023 ಕರ್ನಾಟಕ ಲೋಕ ಸೇವಾ ಆಯೋಗವು ಏಪ್ರಿಲ್ 1 ಮತ್ತು 2 ರಂದು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ ಮತ್ತು ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರ ಹುದ್ದೆಗಳಿಗೆ ನಡೆಸಲಿರುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಜಿಲ್ಲೆಯ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳ 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಹೇಳಿದರು.

ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಏಪ್ರಿಲ್ 1 ಬೆಳಿಗ್ಗೆ 10 ರಿಂದ 12 ರವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ಅವಳಿ ನಗರಗಳ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4216ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.

ಏಪ್ರಿಲ್ 2 ರಂದು 10 ರಿಂದ 11.30ರವರೆಗೆ ಪರೀಕ್ಷೆಗಳು ನಡೆಯುತ್ತಿದೆ. ಅಂದು ಒಟ್ಟು 4560 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಈ ಪರೀಕ್ಷೆಗಳು ಸುಗಮವಾಗಿ ನಡೆಯುವಲ್ಲಿ ಪ್ರತಿ ಕೇಂದ್ರಕ್ಕೆ ಓರ್ವರಂತೆ ಗ್ರೂಫ್ ಬಿ. ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಲ್ಲದೆ ಮಾರ್ಗಾಧಿಕಾರಿ, ವೀಕ್ಷಕರು ಹಾಗೂ ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು ನಿಯೋಜಿಸಲಾಗಿದೆ.

ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಪರೀಕ್ಷಾ ಮಾರ್ಗಸೂಚಿಯಂತೆ ಪರೀಕ್ಷಾ ದಿನದಂದು ತಮ್ಮ ಜವಾಬ್ದಾರಿಯರಿತು ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದವರು ತಿಳಿಸಿದರು.

* ಈ ಪರೀಕ್ಷೆಗಳು ಪೂರ್ವಯೋಜನೆಯಂತೆ ನಿಗಧಿಪಡಿಸಿದ ದಿನಾಂಕದಂದು ಸೂಚಿತ ಅವಧಿಯಲ್ಲಿ ನಡೆಯಲಿವೆ. ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಪರೀಕ್ಷಾರ್ಥಿಗಳು ಸಕಾಲದಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಪರೀಕ್ಷೆಯಲ್ಲಿ ಭಾಗವಹಿಸಿ ಎಂದು ಡಾ.ಆರ್.ಸೆಲ್ವಮಣಿ, ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಈ ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ಅವಧಿಯಲ್ಲಿ ಪರೀಕ್ಷಾರ್ಥಿಗಳು ಪರೀಕ್ಷೆ ನಡೆಯುವ ಒಂದು ಗಂಟೆ ಮೊದಲೇ ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ಅನವಶ್ಯಕವಾಗಿ ಗುಂಪುಗೂಡದಂತೆ ಸೂಚಿಸಲಾಗಿದೆ. ಪರೀಕ್ಷೆಗಳು ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಡೆಯಲು ಪೊಲೀಸ್ ಸೇರಿದಂತೆ ಅಗತ್ಯ ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಮೊಬೈಲ್, ಲ್ಯಾಪ್‌ಟಾಪ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ವಿದ್ಯುನ್ಮಾನ ಉಪಕರಣಗಳು, ಸ್ಮಾರ್ಟ್ವಾಚುಗಳನ್ನು ಕೊಂಡೊಯ್ಯದಂತೆ ಸೂಚಿಸಲಾಗಿದೆ.ಕೇಂದ್ರದ ಮೇಲ್ವಿಚಾರಕರು ನೀರು, ಶೌಚಾಲಯ, ಶುದ್ಧ ಗಾಳಿ, ಬೆಳಕು ಸೇರಿದಂತೆ ಕೇಂದ್ರಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಸೂಚಿಸಿರುವುದಾಗಿ ಅವರು ಹೇಳಿದ್ದಾರೆ.

KPSC Exam 2023 ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಶೈಲ ಬಿರಾದಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪರಮೇಶ್ವರ್, ಜಿಲ್ಲಾ ಖಜಾನಾಧಿಕಾರಿ ಹೆಚ್.ಎಸ್.ಸಾವಿತ್ರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಸೇರಿದಂತೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧಿಕ್ಷಕರು, ನಿರೀಕ್ಷಣಾಧಿಕಾರಿಗಳು ಹಾಗೂ ವೀಕ್ಷಕರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...