Rotary Organization ಯುವಜನರಲ್ಲಿ ಸೇವಾ ಮನೋಭಾವನೆ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ರೋಟರಿ ಸಂಸ್ಥೆಯು ಮಹತ್ತರ ಪಾತ್ರ ವಹಿಸುತ್ತದೆ. ಯುವಜನತೆ ಹೆಚ್ಚು ಹೆಚ್ಚು ಸೇವಾ ಚಟುವಟಿಕೆಗಳನ್ನು ನಡೆಸಬೇಕು ಎಂದು ರೋಟರಿ ಜಿಲ್ಲೆ 3182ರ ಜಿಲ್ಲಾ ರೋಟರ‍್ಯಾಕ್ಟ್ ಪ್ರತಿನಿಧಿ, ಮಣಿಪಾಲ್ ಸೆಂಟ್ರಲ್ ರೋಟರ‍್ಯಾಕ್ಟ್ ಕ್ಲಬ್‌ನ ಮಹಾಲಸಾ ಕಿಣಿ ಅಭಿಪ್ರಾಯಪಟ್ಟರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ವತಿಯಿಂದ ನೂತನವಾಗಿ ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಎಲೈಟ್ ಗ್ರೂಪ್ ರಚನೆ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಜನರು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪೂರಕವಾಗಿ ಕಾರ್ಯ ಚಟುವಟಿಕೆಗಳು ನಡೆಯುತ್ತವೆ. ಮುಂದಿನ ದಿನಗಳಲ್ಲಿ ಸಮಾಜಮುಖಿಯಾಗಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಎಲೈಟ್ ಸಂಸ್ಥೆಯು ಪ್ರಮುಖವಾಗಿ ಸೇವಾ ಮನೋಭಾವ ಮತ್ತು ನಾಯಕತ್ವ ಗುಣ ಬೆಳಸಿಕೊಳ್ಳಲು ಪೂರಕವಾಗುವ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಉದ್ಯಮಿಗಳನ್ನು ಒಳಗೊಂಡ ಸಮುದಾಯ ಆಧಾರಿತ
Rotary Organization ಸದಸ್ಯರನ್ನು ಒಳಗೊಂಡಿರುವುದು ವಿಶೇಷತೆ ಆಗಿರುವುದು ಅತ್ಯಂತ ಸಂತೋಷದ ಸಂಗತಿ ಎಂದರು.
ನೂತನ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಯಾಗಿ ಪೆಸಿಟ್ ಇಂಜಿನಿಯರಿಂಗ್ ಕಾಲೆಜು ವಿದ್ಯಾರ್ಥಿಗಳಾದ ಆದಿತ್ಯ.ಎಸ್ ಮತ್ತು ಧನ್ವಿ ರಾವ್ ಅಧಿಕಾರ ವಹಿಸಿಕೊಂಡರು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಅಧ್ಯಕ್ಷ ಜಗದೀಶ್ ಸರ್ಜಾ ವಹಿಸಿದ್ದರು.
ಜಿಲ್ಲಾ ಮಾಜಿ ಗವರ್ನರ್ ಪ್ರೊ. ಎ.ಎಸ್.ಚಂದ್ರಶೇಖರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಸಹಾಯಕ ಗೌವರ್ನರ್ ಸುನೀತಾ ಶ್ರೀಧರ್, ಕಾರ್ಯದರ್ಶಿ ವೆಂಕಟೇಶ್ ಮತ್ತು ಯುವಜನ ಸೇವಾ ನಿರ್ದೇಶಕ ಬಸವರಾಜ್ ಉಪಸ್ಥಿತರಿದ್ದರು.