Wednesday, October 2, 2024
Wednesday, October 2, 2024

Dasimayya vachana ದಾಸೀಮಯ್ಯರ ವಚನಗಳಲ್ಲಿ ಜೀವನದ ಅನುಭವವಿದೆ-ಕೆ.ಶ್ರೀನಿವಾಸ್

Date:

Dasimayya vachana ಇಡೀ ಮಾನವ ಕುಲಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ಸಾರಿದ ಆದ್ಯ ವಚನಕಾರ ದೇವರ ದಾಸಿಮಯ್ಯ ಅವರು ಸರ್ವ ಸಮುದಾಯಗಳಿಗೆ ಮಾದರಿ ಎಂದು ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಕೆ.ಶ್ರೀನಿವಾಸ್ ಹೇಳಿದರು.

ಚಿಕ್ಕಮಗಳೂರಿನ ಎಂ.ಜಿ.ರಸ್ತೆಯ ದೇವಾಂಗ ಸಂಘದ ಕಚೇರಿಯಲ್ಲಿ ದೇವರ ದಾಸಿಮಯ್ಯನವರ 1043ನೇ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.

ದೇವರದಾಸಿಮಯ್ಯರು ತಮ್ಮ ಕಾಲದಲ್ಲಿಯೇ ಮಹಿಳೆ ಮತ್ತು ಪುರುಷರಿಗೆ ಸಮಾನ ಹಕ್ಕು ನೀಡಿದರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದರು. ದಾಸಿಮಯ್ಯನವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತದೆ. ಜೀವನದ ಅನುಭವ ಅವರ ವಚನಗಳಲ್ಲಿವೆ ಎಂದು ತಿಳಿಸಿದರು.
Dasimayya vachana ವಚನಗಳ ಮೂಲಕ ಜಾತಿಧರ್ಮಗಳ ವಿರುದ್ಧ ಸಿಡಿದೆದ್ದು ಎಲ್ಲರೂ ಸಮಾನರು ಎಂದು ಸಾರಿದ ದೇವರ ದಾಸಿಮಯ್ಯನವರು ಸಾಮಾಜಿಕ ಕ್ರಾಂತಿಗೆ ಬುನಾದಿ ಹಾಕಿದದವರು. .

ವಿಶ್ವದ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿ ದವರು. ಅಂಧಕಾರದಿಂದ ಅಜ್ಞಾನದ ಕಡೆಗೆ ಅಂದಿನ ಶತಮಾನದಲ್ಲಿಯೇ ಹೋರಾಡಿದ ಹಿರಿಮೆ ಅವರ ದಾಗಿತ್ತು ಎಂದು ಹೇಳಿದರು.
ಸಂಘದ ಉಪಾಧ್ಯಕ್ಷ ಬಿ.ಎಂ.ತಿಮ್ಮಶೆಟ್ಟಿ ಮಾತನಾಡಿ ಕಾಯಕ, ದಾಸೋಹ, ಜ್ಞಾನಬೋಧನೆ ಎಂಬ ಮೂರು ತತ್ವಪದಗಳ ಮೂಲಕ ಸಮಾಜದಲ್ಲಿರುವ ಜಾತೀಯತೆ, ಮೂಢನಂಬಿಕೆ ಹೋಗಲಾಡಿಸಿ ಸಮಾನತೆಯನ್ನು ಸಾರಿದ ಶ್ರೇಷ್ಟ ಶರಣರು ದೇವರ ದಾಸಿಮಯ್ಯರಿಗೆ ಹತ್ತು ಹಲವಾರು ಹೆಸರಿನಿಂದ ಕರೆಯಲಾಗುತ್ತದೆ ಎಂದರು.

ಜಿಲ್ಲಾ ಗೌರವಾಧ್ಯಕ್ಷ ಅರೇಕಲ್ ಪ್ರಕಾಶ್ ಮಾತನಾಡಿ ಸಮುದಾಯದವರ ಹೋರಾಟದ ಫಲವಾಗಿ ದಾಸಿಮಯ್ಯ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಮುಂದಾಗಿರುವುದು ಸ್ವಾಗತಾರ್ಹ.

ಸಮುದಾಯದವರು ಇದನ್ನು ಒಂದು ದಿವಸಕ್ಕೆ ಮಾತ್ರ ಸೀಮಿತಗೊಳಿಸದೆ ನಿತ್ಯಜೀವನದಲ್ಲಿ ಅವರ ವಚನಸಾರ ಅಳವಡಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ನಿರ್ದೇಶಕ ಹರೀಶ್‌ಕುಮಾರ್, ಜಂಟಿ ಕಾರ್ಯದರ್ಶಿ ಸಿ.ಎಸ್.ರವಿಕುಮಾರ್, ಖಜಾಂಚಿ ಬಿ.ಎಲ್.ಪ್ರಕಾಶ್, ಸಂಘಟನಾ ಕಾರ್ಯದರ್ಶಿ ದಿನೇಶ್, ಸದಸ್ಯರಾದ ಲೋಹಿತ್, ಉಮೇಶ್, ಮೋಹನ್, ರಾಧಾರಾಜಕುಮಾರ್, ಭಾರತಿ ಮತ್ತಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...