Monday, May 4, 2026
Monday, May 4, 2026

Balebare Ghat ತೀರ್ಥಹಳ್ಳಿ ಕುಂದಾಪುರ ನಡುವೆ ಬಾಳೆಬರೆ ಘಾಟ್ ಹೆದ್ದಾರಿ 52 ರಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ಸೂಚನೆ

Date:

Balebare Ghat ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಈ ಮಾರ್ಗದಲ್ಲಿ ಏ.15 ರವರೆಗೆ ವಾಹನ ಸಂಚಾರ ನಿಷೇಧಿಸಿ ಮತ್ತು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ನಡೆಯುವಾಗ ಹಲವು ಬಾರಿ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ವ್ಯವಸ್ಥೆಯನ್ನು ಏ.15 ರವರೆಗೆ ಅಂದರೆ ಹೆಚ್ಚುವರಿ ಹತ್ತು ದಿವಸುಗಳ ಕಾಲ ವಿಸ್ತರಿಸಲಾಗಿದೆ.

Balebare Ghat ಹಾಲಿ ಬಳಕೆ ಮಾಡುತ್ತಿರುವ ರಸ್ತೆಗಳು ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.

ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.

ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಲು ಅಧಿಸೂಚನೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...