Election campaign ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಡಾ|| ಸೆಲ್ವಮಣ ಆರ್. ಆದೇಶಸಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕಗಳು ಪ್ರಕಟಣೆಯಾಗುವ ಮುಂಚೆಯೇ ರಾಜಕೀಯ ಪಕ್ಷಗಳು, ತಮ್ಮ ಪಕ್ಷದ ವತಿಯಿಂದ ಸಮುದಾಯವನ್ನು ತಲುಪಲು ಹಲವಾರು ರೀತಿಯ ಮೆರವಣ ಗೆ, ಸಾರ್ವಜನಿಕ ಭಾಷಣ, ಮನೆ ಭೇಟಿ, ಸಭೆ ಸಮಾರಂಭ, ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಈ ಕಾರ್ಯಕ್ರಮಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಚುನಾವಣಾ ಪ್ರಚಾರದ ಮೆರವಣಿಗೆಯಲ್ಲಿ ಪಕ್ಷದ ಬಾವುಟ ಹಿಡಿದು ಹೆಚ್ಚು ಜನ ಭಾಗವಹಿಸಬೇಕೆಂಬ ಆಶಯದಿಂದ ಹಿರಿಯರೊಂದಿಗೆ ಮಕ್ಕಳನ್ನು ಸೇರಿಸಿಕೊಳ್ಳುವ, ಮಕ್ಕಳಿಗೆ ಪಕ್ಷದ ಚಿಹ್ನೆ ಇರುವ ಬಟ್ಟೆ ನೀಡುವುದು, ಪಕ್ಷದ ವಿವರ ಇರುವ ನೋಟ್‌ಬುಕ್‌ಗಳನ್ನು ಹಂಚುವುದು ಮತ್ತು ಎನೂ ಅರಿಯದ ಶಾಲಾ ಮಕ್ಕಳನ್ನು ಶಾಲೆ ಬಿಟ್ಟು ಪಕ್ಷದ ಚುನಾವಣಾ ಪ್ರಚಾರ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
Election campaign ಮಕ್ಕಳನ್ನು ಬಳಸಿಕೊಂಡಿದ್ದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ವಿಶ್ವ ಸಂಸ್ಥೆಯ ಒಡಂಬಡಿಕೆ ಪರಿಚ್ಚೇಧ 19ರನ್ವಯ ಮಕ್ಕಳನ್ನು ಯಾವುದೇ ರೀತಿಯಲ್ಲಿ ದುರುಪಯೋಗ ಪಡಿಸಿಕೊಂಡಿದ್ದು ಕಂಡುಬಂದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.
ರಾಜಕೀಯ ಪಕ್ಷಗಳು ಆಯೋಜಿಸುವ ಚುನಾವಣಾ ಪ್ರಚಾರದ ಮೆರವಣಿಗೆ, ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಲ್ಲಿ ಮಕ್ಕಳೇ ಉತ್ಸಾಹದಿಂದ ಭಾಗವಹಿಸುವ ಸಂದರ್ಭಗಳು ಕಂಡುಬರುವುದರಿಂದ ಏನೂ ಅರಿಯದ ಮಕ್ಕಳ ಹಕ್ಕು ಉಲ್ಲಂಘನೆಯಾಗುತ್ತವೆ. ಆದ್ದರಿಂದ ಕಾರ್ಯಕ್ರಮದ ಆಯೋಜಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಕಾರ್ಯಕ್ರಮಕ್ಕೆ ಭಾಗವಹಿಸದಿರುವಂತೆ ತಿಳಿಸಬೇಕು.
ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ತಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.ರಾಜಕೀಯ ಪಕ್ಷದ ಅಭ್ಯರ್ಥಿಗಳು/ಸ್ವತಂತ್ರ‍್ಯ ಅಭ್ಯರ್ಥಿಗಳು/ಪಕ್ಷದ ಕಾರ್ಯಕರ್ತಗಳು 2023ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಾಗೂ ರಾಜಕೀಯ ಪಕ್ಷದ ಕುರಿತು ಮತ ನೀಡುವಂತೆ ಕೋರುವುದನ್ನು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಯಾವುದೇ ರೀತಿಯಲ್ಲಿ ಬಳಸಿಕೊಳ್ಳದಂತೆ ನಿಷೇಧಿಸಿದೆ. ಒಂದು ವೇಳೆ ಚುನಾವಣಾ ಪ್ರಚಾರಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವುದು ಕಂಡುಬಂದಿದ್ದಲ್ಲಿ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದಲ್ಲಿ ಜಿಲ್ಲಾ ಪಂಚಾಯತ್, ತಾಲ್ಲೂಕು/ಗ್ರಾಮ ಪಂಚಾಯತ್‌ಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆ, ಆರೋಗ್ಯ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ತಹಶೀಲ್ದಾರರು, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಕ್ಕಳ ಸಹಾಯವಾಣ ಮತ್ತು ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳು ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಮಕ್ಕಳನ್ನು ಚುನಾವಣಾ ಕಾರ್ಯದಲ್ಲಿ ಬಳಸಿಕೊಂಡಿದ್ದು ಕಂಡುಬಂದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪರಿಚ್ಚೇಧ 19ರನ್ವಯ ಮಕ್ಕಳನ್ನು ಯಾವುದೇ ರೀತಿಯಲ್ಲೂ ದುರುಪಯೋಗ ಮಾಡಿಕೊಳ್ಳಬಾರದೆಂದು ತಿಳಿಸುತ್ತದೆ.
ಜಿಲ್ಲೆಯ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮಕ್ಕಳ ದುರುಪಯೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಕುರಿತು ಹೊರಡಿಸಲಾಗಿರುವ ಈ ಮೇಲಿನ ಶಿಫಾರಸ್ಸುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಕೈಗೊಳ್ಳಲು ಆದೇಶದಲ್ಲಿ ತಿಳಿಸಿದ್ದಾರೆ.