Rotary International ಸಾಧಕರಿಗೆ ಪ್ರೋತ್ಸಾಹಿಸಿ ಗೌರವಿಸುವುದರಿಂದ ಯುವಜನತೆಯ ಆತ್ಮವಿಶ್ವಾಸ ಹೆಚ್ಚಿಸುವ ಜತೆಯಲ್ಲಿ ಪ್ರೇರಣೆ ನೀಡಲು ಸಾಧ್ಯವಾಗುತ್ತದೆ. ಸಾಧಕರಿಗೂ ವಿಶೇಷ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಎಸ್.ಸುಮ ಹೇಳಿದರು.
ರೋಟರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ವಿವಿಧ ಕ್ಷೇತ್ರಗಳ ಸಾಧಕರಿಗೆ ಮಹಿಳಾ ಸ್ಫೂರ್ತಿ ರತ್ನ ಗೌರವ ಹಾಗೂ ಚಿಣ್ಣರ ಚಿಲಿಪಿಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಮುನ್ನಡೆಯುತ್ತಿದ್ದು, ಪ್ರತಿ ಮಹಿಳೆಯು ಜೀವನದಲ್ಲಿ ಉನ್ನತ ಕನಸುಗಳನ್ನು ಕಂಡು ನನಸು ಮಾಡಿಕೊಳ್ಳುವ ದಿಸೆಯಲ್ಲಿ ಸಾಗಬೇಕು. ಮಹಿಳೆಯರು ಸಾಧಕರ ಜೀವನಗಾಥೆಗಳಿಂದ ಸ್ಫೂರ್ತಿ ಪಡೆದು ಯಶಸ್ವಿಯಾಗಬೇಕು ಎಂದು ತಿಳಿಸಿದರು.
Rotary International ಮಹಿಳೆಯರಿಗೆ ಕಾರ್ಮಿಕ ಇಲಾಖೆಯಿಂದ ವಿಶೇಷ ಸೌಲಭ್ಯ ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಮಹಿಳೆಯರು ಕಾರ್ಮಿಕ ಇಲಾಖೆಯಲ್ಲಿ ಸಿಗುವ ಮತ್ತುಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳಬೇಕು. ಮಹಿಳೆಯರು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಿಗುವ ಯೋಜನೆಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದರು.
ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ.ಕುಮಾರಸ್ವಾಮಿ ಮಾತನಾಡಿ, ನಮ್ಮ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಹಾಗೂ ಸೇವಾ ಕಾರ್ಯಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ಮಹಿಳಾ ದಿನಾಚರಣೆ ಪ್ರಯುಕ್ತ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರಿಗೆ ಗೌರವಿಸಲಾಗುತ್ತಿದೆ ಎಂದು ಹೇಳಿದರು.
ಶಿಕ್ಷಣ ಇಲಾಖೆಯ ಕನ್ಯಾಕುಮಾರಿ, ಸಮಾಜ ಸೇವೆ ಸಲ್ಲಿಸುತ್ತಿರುವ ಮಾಲಾ ರಾಮಪ್ಪ, ಲೇಖಕಿ ಅನಿತಾ ಕೃಷ್ಣ, ದೇಶ ಸೇವೆ ಸಲ್ಲಿಸುತ್ತಿರುವ ಅಂಬಿಕಾ ಅವರಿಗೆ ರೋಟರಿ ಶಿವಮೊಗ್ಗ ವತಿಯಿಂದ ಸನ್ಮಾನಿಸಲಾಯಿತು.
ನಂತರ ಚಿಣ್ಣರ ಚಿಲಿಪಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕೆ.ಕುಮಾರಸ್ವಾಮಿ, ಚಂದ್ರಹಾಸ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ಕಡಿದಾಳ್ ಗೋಪಾಲ್, ಎಚ್.ಬಿ.ಆದಿಮೂರ್ತಿ, ಚಂದ್ರಹಾಸ ಪಿ.ರಾಯ್ಕರ್, ಮಂಜುನಾಥರಾವ್ ಕದಂ, ಕಿಶೋರ್, ಹುಲಿರಾಜ್ ಗುಬ್ಬಿ, ಶ್ವೇತಾ ಆಶಿತ್, ಶ್ವೇತಾ ಅವಿನಾಶ್, ಬಿಂದು ವಿಜಯ್‌ಕುಮಾರ್, ಸಾಯಿ ಗೃಹ ನಿರ್ಮಾಣ ಸಹಕಾರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.