Tuesday, February 3, 2026
Tuesday, February 3, 2026

JCI Shivamogga ನಾಯಕತ್ವ ಗುಣ ಬೆಲೆಸುವಲ್ಲಿ ಜೆಸಿಐ ಮಹತ್ತರ ಪಾತ್ರ-ಮಾನಕ್ ಚಂದ್

Date:

JCI Shivamogga ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಜತೆಯಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತದೆ. ಯುವಜನತೆ ಜೆಸಿಐನಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ ಕುನಾಲ್ ಮಾನಕಚಂದ್ ಹೇಳಿದರು.

ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಪರಿಣಾಮಕಾರಿ ಸಂವಹನ ಕೌಶಲ್ಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಧನಾತ್ಮಕ ಆಲೋಚನೆ ಹಾಗೂ ಉತ್ತಮ ನಿರ್ಧಾರಗಳನ್ನು ಕೈಗೊಳ್ಳುವಂತೆ ವ್ಯಕ್ತಿತ್ವ ಬೆಳೆಸುವಲ್ಲಿ ಜೆಸಿಐ ಹೆಚ್ಚು ಸಹಕಾರಿ ಆಗಿದೆ.
ಜೀವನದಲ್ಲಿ ಯಶಸ್ಸು ಗಳಿಸಲು ನೆರವಾಗುತ್ತದೆ ಎಂದು ತಿಳಿಸಿದರು.

JCI Shivamogga ಜೆಸಿಐ ಸಂಸ್ಥೆಯು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ವಿಶ್ವವಿದ್ಯಾಲಯದಷ್ಟು ಅಪಾರ ಜ್ಞಾನಭಂಡಾರ ಹೊಂದಿದ್ದು, ಜೆಸಿಐನಲ್ಲಿ ಭಾಗಿಯಾಗುವ ಪ್ರತಿಯೊಬ್ಬರು ಜೀವನ ಉತ್ತಮಗೊಳಿಸಲು ಅಗತ್ಯವಿರುವ ಅಂಶಗಳನ್ನು ಕಲಿಯುತ್ತಾರೆ. ಜೆಸಿ ಸದಸ್ಯರ ತೊಡಗಿಸಿಕೊಳ್ಳುವಿಕೆಯು ಬಹಳ ಮುಖ್ಯವಾಗುತ್ತದೆ ಎಂದರು.

ಶಿವಮೊಗ್ಗ ಬಿಇಒ ನಾಗರಾಜ್ ಮಾತನಾಡಿ, ಸೇವಾ ಮನೋಭಾವದಿಂದ ಸಮಾಜದಲ್ಲಿ ಉತ್ತಮ ಕೆಲಸ ಮಾಡುತ್ತಿರುವ ಸಂಸ್ಥೆ ಜೆಸಿಐ. ಶಾಲಾ ಅಭಿವೃದ್ಧಿ ಕಾರ್ಯಗಳಲ್ಲಿಯು ಜೆಸಿಐ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡಿದೆ. ನಿರಂತರವಾಗಿ ಶಿಕ್ಷಣ, ಆರೋಗ್ಯ, ವ್ಯಕ್ತಿತ್ವ ನಿರ್ಮಾಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಕೆ, ಉತ್ತಮ ವ್ಯಕ್ತಿತ್ವ ನಿರ್ಮಾಣ ಹಾಗೂ ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯಾಗಿ ನಿರ್ಮಾಣ ಮಾಡುವುದು ಶಿಕ್ಷಣದ ಮೂಲ ಆಶಯ. ಶಿಕ್ಷಣದ ಜತೆಯಲ್ಲಿ ಸಂವಹನ ಕೌಶಲ್ಯವು ಅತ್ಯಂತ ಅವಶ್ಯಕ. ಉತ್ತಮ ಸಾಧಕರಾಗಿ ರೂಪುಗೊಳ್ಳಲು ಸಂವಹನ ಅತ್ಯಂತ ಅಗತ್ಯ ಎಂದು ತಿಳಿಸಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ ಹಿರೇಮಠ್ ಮಾತನಾಡಿ, ಯುವಜನರಲ್ಲಿ ನಾಯಕತ್ವ ಗುಣ ಸೇರಿದಂತೆ ಕೌಶಲ್ಯಯುತ ವ್ಯಕ್ತಿತ್ವ ನಿರ್ಮಿಸುವಲ್ಲಿ ಜೆಸಿಐ ವಿಶೇಷ ಸಂವಹನ ಕೌಶಲ್ಯ ಕಾರ್ಯಾಗಾರ ಹಮ್ಮಿಕೊಂಡಿದ್ದು, ಭಾಗಿಯಾಗಿರುವ ಪ್ರತಿಯೊಬ್ಬರು ತರಬೇತಿಯ ಸಂಪೂರ್ಣ ಪ್ರಯೋಜನ ಪಡೆದುಕೊಂಡು ಉತ್ತಮ ಸಂವಹನಕಾರರಾಗಬೇಕು. ಉತ್ತಮ ಸಂವಹನ ಕೌಶಲ್ಯ ಜೀವನದಲ್ಲಿ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಜೆಸಿ ಕಾರ್ಯಕ್ರಮ ಸಂಯೋಜಕ ಮಂಜುನಾಥ ಕದಂ ಮಾತನಾಡಿ, ಜೆಸಿಐ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಸೇರಿದಂತೆ ಸೇವಾ ಕ್ಷೇತ್ರದಲ್ಲಿ ವಿಶೇಷ ಕೆಲಸ ಮಾಡುತ್ತಿದ್ದು, ಯುವಜನರು ಜೆಸಿಐನಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಇದರಿಂದ ಸಾಧನೆಯ ಹಾದಿಯಲ್ಲಿ ಮಾರ್ಗದರ್ಶನವಾಗಿ ನೆರವಾಗುತ್ತದೆ ಎಂದು ತಿಳಿಸಿದರು.
ಜೆಸಿಐ ವಲಯ ಅಧ್ಯಕ್ಷ ಅನುಷ್ ಗೌಡ, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ನಿಕಟಪೂರ್ವ ಅಧ್ಯಕ್ಷ ಸತೀಶ್ ಚಂದ್ರ, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಕಾರ್ಯದರ್ಶಿ ಡಾ. ಲಲಿತಾ ಭರತ್, ಜೆಸಿ ರಾಷ್ಟ್ರೀಯ ತರಬೇತುದಾರ ಪ್ರಜ್ವಲ್ ಜೈನ್, ಜೆಸಿ ಸಂತೋಷ್, ಕುಮಾರಿ ವರ್ಷಿತಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...