Wednesday, February 4, 2026
Wednesday, February 4, 2026

Blood Donation ಯುವಜನ ರಕ್ತದಾನದಿಂದ ಮಾಡುವುದರಿಂದ ಸದೃಢರಾಗುತ್ತಾರೆ-ಅರವಿಂದ ಶರ್ಮಾ

Date:

Blood Donation ಪ್ರತಿ ನಿತ್ಯ ನಮ್ಮ ವೃತ್ತಿಯ ಜತೆಯಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳು ಮುಂದಾಗಬೇಕು. ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಮ್ಯಾನೇಜರ್ ಅರವಿಂದ ಶರ್ಮಾ ಹೇಳಿದರು.

ಶಿವಮೊಗ್ಗ ನಗರದ ಸವಾರ್ ಲೈನ್ ರಸ್ತೆಯಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಬ್ಯಾಂಕ್‌ನ 129ನೇ ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಸಹಕಾರದೊಂದಿಗೆ ಬ್ಯಾಂಕ್ ನೌಕರರು ಮತ್ತು ಗ್ರಾಹಕರು ರಕ್ತದಾನ ಮಾಡಿದರು.

ಬ್ಯಾಂಕ್ ವತಿಯಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದು, ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ರಕ್ತದಾನದಂತಹ ಸೇವಾ ಕಾರ್ಯ ಆಯೋಜಿಸಲಾಗಿದೆ.

Blood Donation ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಅನೇಕರು ರಕ್ತದಾನ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸಮಾಜದಲ್ಲಿ ಅವಶ್ಯಕತೆ ಇರುವ ರಕ್ತದ ಕೊರತೆ ನೀಗಿಸುವಲ್ಲಿ ರಕ್ತದಾನ ಶಿಬಿರಗಳು ಸಹಕಾರಿ ಆಗುತ್ತವೆ. ರಕ್ತದಾನ ಶಿಬಿರಗಳಲ್ಲಿ ಹೆಚ್ಚು ಜನರು ರಕ್ತದಾನ ಮಾಡಲು ಮುಂದಾಗಬೇಕು. ಆರೋಗ್ಯವಂತ ಯುವಜನತೆ ರಕ್ತದಾನ ಮಾಡುವುದರಿಂದ ಆರೋಗ್ಯ ಸದೃಢವಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆ ಮಾಜಿ ಅಧ್ಯಕ್ಷ ಜಿ.ವಿಜಯ್‌ಕುಮಾರ್ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠದಾನ. ಆರೋಗ್ಯವಂತ ಯುವಜನರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಅಮೂಲ್ಯ ಜೀವ ಉಳಿಸುವ ಮಹಾತ್ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

110 ಬಾರಿ ರಕ್ತದಾನ ಮಾಡಿರುವ ಧರಣೇಂದ್ರ ದಿನಕರ್ ಮಾತನಾಡಿದರು. ಡಾ. ದಿನಕರ್ ರಕ್ತದಾನದಿಂದ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ಅಜಯ್‌ಕುಮಾರ್ ಸಿಂಗ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...