Thursday, December 18, 2025
Thursday, December 18, 2025

Canara Bank Rural Self Employment Training Center ಏಪ್ರಿಲ್17 ರಿಂದ ಹೊಳಲೂರಿನಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕಾ ಉಚಿತ ತರಬೇತಿ

Date:

Canara Bank Rural Self Employment Training Center ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ,ಶಿವಮೊಗ್ಗ ತಾಲ್ಲೂಕು ಹೊಳಲೂರಿನಲ್ಲಿ “ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ” 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 08ನೇ ತರಗತಿ ಉತ್ತೀರ್ಣರಾಗಿರಬೇಕು.

ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

Canara Bank Rural Self Employment Training Center ತರಬೇತಿಯು 17/04/2023 ರಿಂದ ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 8722384541, 9743429595, 8660062683, 9449371579, 9481955721 ಅನ್ನು ಸಂಪರ್ಕಿಸಬಹುದಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...