Thursday, March 19, 2026
Thursday, March 19, 2026

Rotary Organization ರೋಟರಿ ಸಂಸ್ಥೆಯಿಂದ ಉದ್ಯೋಗಾರ್ಥಿಗಳಿಗೆ ಸಾಫ್ಟ್ ವೇರ್ ಕಂಪೆನಿ ಆಯ್ಕೆಪೂರ್ವ ಕೌಶಲ ತರಬೇತಿ

Date:

Rotary Organization ಕೌಶಲ್ಯ ಅಭಿವೃದ್ಧಿ ಹಾಗೂ ವೃತ್ತಿ ಸೇವಾ ಅವಕಾಶಗಳ ಬಗ್ಗೆ ಉಚಿತ ತರಬೇತಿ ಹಾಗೂ ಮಾರ್ಗದರ್ಶನ ನೀಡಲು ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ಸಂಸ್ಥೆ ಹಾಗೂ ಕ್ಯಾಲೈಟೆಕ್ಸ್ ಇಂಡಿಯಾ ಮುಂದಾಗಿದೆ.

ರೋಟರಿ ಸಂಸ್ಥೆಯ ಮಾರ್ಗದರ್ಶನ ಹಾಗೂ ಅಂತರಾಷ್ಟ್ರೀಯ ರೋಟರಿ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಅವಕಾಶಗಳಲ್ಲಿ ವಂಚಿತರಾದ ಹಾಗೂ ಆರ್ಥಿಕವಾಗಿ ಹಿಂದುಳಿದ ಪಿಯು ನಂತರ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದೇ ತಮ್ಮ ಆಶೋತ್ತರಗಳನ್ನು ಪೂರೈಸಲಾಗದೇ ಉಳಿದಂತಹ ಯುವಕ, ಯುವತಿಯರ ಪಾಲಿಗೆ ಬೆಳಕಾಗುವ ನೂತನ ಪರಿಕಲ್ಪನೆ ಸಿದ್ಧಪಡಿಸಲಾಗಿದೆ.
.
ಕ್ಯಾಲೈಟೆಕ್ಸ್ ಇಂಡಿಯಾ ಸಂಸ್ಥೆ ಕೌಶಲ್ಯ ಅಭಿವೃದ್ಧಿ ಕಾರ್ಯ ಚಟುವಟಿಕೆಗಳನ್ನು ಹಲವು ಹಂತಗಳಲ್ಲಿ ಪರಿಚಯಿಸುತ್ತಿದೆ. ಮೊದಲನೆಯ ಹಂತದಲ್ಲಿ ಕಾರ್ಪೋರೇಟ್ ಕಂಪನಿಗಳಲ್ಲಿ ವ್ಯವಹರಿಸಲು ಆತ್ಯವಶ್ಯಕವಾದ ಆಂಗ್ಲಭಾಷೆ ಮಾತನಾಡುವ ಹಾಗೂ ಬರವಣಿಗೆಯನ್ನು ಯಶಸ್ವಿಯಾಗಿ ಕೈಗತ ಮಾಡುವುದು.

Rotary Organization ಎರಡನೆಯ ಹಂತದಲ್ಲಿ ಶಿಭಿರಾರ್ಥಿಗಳು ಕಂಪ್ಯೂಟರ್ ವಿಜ್ಷಾನದ ಮೂಲೋದ್ಧೇಶ ಪ್ರಾಥಮಿಕ ಮಾಹಿತಿ, ಸಾಪ್ಟವೇರ್‌ಗಳ ಪರಿಚಯ. ಮೂರನೆಯ ಹಂತದಲ್ಲಿ ಕಾರ್ಯಕ್ರಮ ನಿರೂಪಣೆ, ಪರೀಕ್ಷೆ ಹಾಗೂ ಕಂಪ್ಯೂಟರ್ ಹಾರ್ಡ್‌ವೇರ್‌ ಗಳ ಮಾಹಿತಿ ಕಮ್ಯೂನಿಕೇಷನ್ ತರಬೇತಿ. ಕೊನೆಯ ಹಂತದಲ್ಲಿ ಶಿಬಿರಾರ್ಥಿಗಳ ಅಮೂಲಾಗ್ರ ತರಬೇತಿಯ ನಿರ್ವಹಣೆ ಹಾಗೂ ಮಾನದಂಡದ ಬಗ್ಗೆ ಸರ್ಟಿಫಿಕೇಷನ್ ನೀಡುವುದು.

ಅತ್ಯುತ್ತಮ ಮಾನದಂಡದ ಅರ್ಹತೆ ಪಡೆದ ಶಿಬಿರಾರ್ಥಿಗಳಿಗೆ ಕ್ಯಾಲೆಟಕ್ಸ್ ಕಂಪನಿಯಲ್ಲಿ ವಾರ್ಷಿಕ 3,00,000 ರೂ. ಸಂಬಳದ ಆಧಾರದಲ್ಲಿ ನೇಮಿಸಿಕೊಳ್ಳಲಾಗುತ್ತದೆ. ತರಬೇತಿ ಅವಧಿಯಲ್ಲಿ (3 ಮತ್ತು 4ನೇ ಹಂತ) ಶಿಬಿರಾರ್ಥಿಗಳಿಗೆ 5,000 ರೂ. ಸ್ಟೈಫಂಡ್ ನೀಡಲಾಗುತ್ತದೆ.

ತರಬೇತಿಯ ಅನುಭವದ ಆಧಾರದಲ್ಲಿ ಬೇರೆ ಬೇರೆ ಸಾಫ್ಟ್ವೇರ್ ಕಂಪನಿಗಳಲ್ಲಿ ವಿಪುಲ ಅವಕಾಶಗಳಿವೆ.
ಶಿಬಿರಕ್ಕೆ ಅರ್ಹರಾದ ವಿದ್ಯಾರ್ಥಿಗಳನ್ನ ಪರಿಚಯಿಸಿ ಪ್ರತಿಯೊಂದು ಬ್ಯಾಚ್‌ಗೆ 30 ಅರ್ಹರಿಗೆ ಅವಕಾಶ ನೀಡಲಾಗುತ್ತದೆ. ಪ್ರವೇಶ ಪರೀಕ್ಷೆಗಳನ್ನು 23-04-2023ರ ಭಾನುವಾರ 100 ಅಡಿ ರಸ್ತೆಯಲ್ಲಿರುವ ರೋಟರಿ ರಕ್ತನಿಧಿ ಸಭಾಂಗಣದಲ್ಲಿ ಬೆಳಗ್ಗೆ 10-30 ಕ್ಕೆ ನಡೆಸಲಾಗುತ್ತದೆ.

ಪರೀಕ್ಷೆಯಲ್ಲಿ ಶಿಬಿರಾರ್ಥಿಗಳ ಬುದ್ಧಿಶಕ್ತಿ, ಗ್ರಹಣಶಕ್ತಿ, ಐಕ್ಯೂ ಮತ್ತು ಇಕ್ಯೂ ಪರೀಕ್ಷೆ ನಡೆಸಲಾಗುತ್ತದೆ. ಆಸಕ್ತ ಶಿಬಿರಾರ್ಥಿಗಳು ಪಿ.ಯು ಅಂಕಪಟ್ಟಿ, , ಬಿ.ಪಿ.ಎಲ್. ಕಾರ್ಡ್, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮಾಹಿತಿ ತರಬೇತಕು ಎಂದು ರೋಟರಿ ಶಿವಮೊಗ್ಗ ಮಿಡ್ ಟೌನ್ ಅಧ್ಯಕ್ಷೆ ವೀಣಾ ಸುರೇಶ್ ತಿಳಿಸಿದ್ದಾರೆ.

ಮಾಹಿತಿಗೆ ಮೊಬೈಲ್ ಸಂಖ್ಯೆ 7829738412 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...