Assembly Election ಮೇ.10 ರಂದು ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಜೊತೆಗೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವಕ್ಫ್ ಮಂಡಳಿಯ ಧಾರ್ಮಿಕ ಸಂಸ್ಥೆಗಳು, ವಿಧಿಗಳಲ್ಲಿ ರಾಜಕೀಯ ಚಟುವಟಿಕೆ ಅಥವಾ ಲಾಭಕ್ಕಾಗಿ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಮಹಮ್ಮದ್ ಶಾಹೀದ್ ರಜ್ವಿ ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಯಲ್ಲಿ ತಿಳಿಸಿರುವ ಅವರು ರಾಜ್ಯ ವಕ್ಫ್ ಸಲಹಾ ಸಮಿತಿಯ ಆದೇಶ ದನ್ವಯ ಜಿಲ್ಲೆಯಲ್ಲಿ ವಕ್ಫ್ ಮಂಡಳಿ ಅಧೀನದಲ್ಲಿರುವ ನೋಂದಾಯಿತ, ನೋಂದಾಯಿತವಿಲ್ಲದಿರುವ ಸಂಸ್ಥೆಗಳು, ಮಸೀದಿ, ದರ್ಗಾ, ಈದ್ಗಾ ಮೈದಾನ, ಇನ್ನಿತರೆ ಧಾರ್ಮಿಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಚಟುವಟಿ ಕೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಆಡಳಿತ ಸಮಿತಿಯವರನ್ನು ನೇರ ಹೊಣೆಗಾರರು ಎಂದು ಬಿಂಬಿಸಿ ಅಂತಹ ವ್ಯಕ್ತಿಗಳ ಮೇಲೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Assembly Election ಈ ಬಗ್ಗೆ ರಾಜ್ಯ ವಕ್ಫ್ ಮಂಡಳಿಯ ಉಲ್ಲೇಖಿತ ಪತ್ರದಲ್ಲಿ ನಿರ್ದೇಶಿಸಲಾಗಿದೆ. ಆದುದರಿಂದ ಕರ್ನಾಟಕ ರಾಜ್ಯದ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು ಚುನಾವಣಾ ಮಾದರಿ ನೀತಿ ಸಂಹಿತೆ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.