Assembly Election ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳಲ್ಲಿ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕ ನಾಯ್ಕ ಪ್ರಚಾರ ಕಾರ್ಯ ನಡೆಸಿದರು.
ಪ್ರತಿ ಬೂತ್‌ಗಳಲ್ಲಿ ನೂರಾರು ಕಾರ್ಯಕರ್ತರು ಬಿಜೆಪಿ ಪರ ಜೈಘೋಷ ಕೂಗಿ ಪ್ರಚಾರದಲ್ಲಿ ಭಾಗಿಯಾಗಿದ್ದರು.
ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ಭಗವತಿ ಕೆರೆ ಗ್ರಾಮದಿಂದ ಶುಕ್ರವಾರ ಬೆಳಗ್ಗೆ ಮತಯಾಚನೆ ಆರಂಭಿಸಿದ ಗ್ರಾಮಾಂತರ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ, ನಂತರ ಶ್ರೀನಿವಾಸಪುರ ಗ್ರಾಮ, ಹನುಮಂತಾಪುರ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳ ಬೂತ್‌ಗಳಲ್ಲಿ ಪ್ರಚಾರ ಕಾರ್ಯ ನಡೆಸಿ ಮತಯಾಚನೆ ನಡೆಸಿದರು.
ಪ್ರತಿ ಗ್ರಾಮಗಳಲ್ಲಿ ಮನೆ ಮನೆಗಳಿಗೆ ತೆರಳಿ ಬಿಜೆಪಿ ಬೆಂಬಲಿಸಲು ಮನವಿ ಮಾಡಿದರು.
ಶ್ರೀನಿವಾಸಪುರ ಗ್ರಾಮದಲ್ಲಿ ಮತಯಾಚನೆ ನಡೆಸಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ.ಅಶೋಕನಾಯ್ಕ, ಪ್ರಧಾನಿ ನರೇಂದ್ರ ಮೋದಿ ಅವರು ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದು, ಬಿಜೆಪಿ ಪಕ್ಷಕ್ಕೆ ಬೂತ್ ಮಟ್ಟದ ಕಾರ್ಯಕರ್ತರ ಸಂಘಟಿತ ಶಕ್ತಿಯೇ ಬಲ. ಪ್ರತಿಯೊಂದು ಬೂತ್‌ಗಳಲ್ಲಿಯೂ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
Assembly Election ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಹಾಶಕ್ತಿ ಕೇಂದ್ರಗಳಲ್ಲಿರುವ ವಿವಿಧ ಬೂತ್‌ಗಳ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಪಕ್ಷ ರಾಜ್ಯದಲ್ಲಿಯೇ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ಮೂಲಕ ಅಭಿವೃದ್ಧಿ ಪರ್ವ ಮುಂದುವರೆಸಲಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯದಲ್ಲಿ ಪ್ರಮುಖರ ಸಭೆ ನಡೆಸಲಾಯಿತು. ಕ್ಷೇತ್ರ ಪ್ರಭಾರಿ ಎಸ್.ದತ್ತಾತ್ರಿ, ಮಂಡಲ ಅಧ್ಯಕ್ಷ ರತ್ನಾಕರ ಶೆಣೈ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಪ್ರಮುಖ್ ವೀರೂಪಾಕ್ಷಪ್ಪ, ಗ್ರಾಮಾಂತರ ಕ್ಷೇತ್ರ ಚುನಾವಣಾ ಸಮಿತಿ ಸಂಚಾಲಕ ಸಿಂಗನಹಳ್ಳಿ ಸುರೇಶ್, ಸ್ವರೂಪ್ ಸೇರಿದಂತೆ ಪ್ರಮುಖರು ಸಭೆ ನಡೆಸಿದರು.
ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರು ಮಹಾಶಕ್ತಿ ಕೇಂದ್ರದ ವಿವಿಧ ಬೂತ್‌ಗಳ ಪ್ರಚಾರ ಕಾರ್ಯದಲ್ಲಿ ಮಂಡಲ ಅಧ್ಯಕ್ಷ ಮಂಜುನಾಥ್ ಕಲ್ಲಜ್ಜನಾಳ್, ಶ್ರೀನಿವಾಸ್, ಪರಮೇಶ್ವರಪ್ಪ, ಸುಬ್ರಹ್ಮಣ್ಯ, ಜಗದೀಶ್ ಮತ್ತಿತರರು ಹಾಜರಿದ್ದರು.