Sunday, May 24, 2026
Sunday, May 24, 2026

Shivamogga Rotary Club ಕಷ್ಟದಲ್ಲಿರುವವರಿಗೆ ಸಹಾಯ ಮಾಡಬೇಕು-ಸುಮತಿ ಕುಮಾರಸ್ವಾಮಿ

Date:

Shivamogga Rotary Club ಜೀವನದಲ್ಲಿ ತುಂಬಾ ಸಂಕಷ್ಟದಲ್ಲಿ ಇರುವವರಿಗೆ ನೆರವು ನೀಡಿದಾಗ ನಾವು ಮಾಡುವ ಸೇವೆಯು ಸಾರ್ಥಕವಾಗುತ್ತದೆ. ಪ್ರತಿಯೊಬ್ಬರು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಅವರು ಹೇಳಿದರು.

ರಾಜೇಂದ್ರನಗರದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸಭಾಂಗಣದಲ್ಲಿ ಸಂಪೂರ್ಣ ದೃಷ್ಠಿದೋಷ ಹೊಂದಿರುವ 3ನೇ ತರಗತಿ ವಿದ್ಯಾರ್ಥಿನಿ ದೀಪ್ತಿಗೆ ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವು ನೀಡಿ ಮಾತನಾಡಿದರು. ಸಮಾಜದಲ್ಲಿ ತುಂಬಾ ಕಷ್ಟದಲ್ಲಿ ಜೀವನ ನಡೆಸುತ್ತಿರುವ ಅನೇಕರು ಇದೆ. ಅವರಿಗೆ ಸಹಾಯ ಮಾಡಲು ಮುಂದಾಗಬೇಕು. ಇದರಿಂದ ಬದುಕಿಗೆ ಬೆಳಕು ನೀಡಿದಂತಾಗುತ್ತದೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರಿಗೆ ನೆರವು ನೀಡಲಾಗುತ್ತಿದೆ. ಬಾಲಕಿಯು ದೃಷ್ಠಿದೋಷ ಎದುರಿಸುತ್ತಿದ್ದು, ಶಸ್ತ್ರ ಚಿಕಿತ್ಸೆಗೆ ಸಹಾಯ ಮಾಡಲಾಗಿದೆ ಎಂದರು.

ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ರೋಟರಿ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡಿ ಸೇವಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಸಮುದಾಯ ಸೇವಾ ಕಾರ್ಯಗಳ ಜೊತೆಯಲ್ಲಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.

Shivamogga Rotary Club ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಕಷ್ಟದಲ್ಲಿ ಇರುವ ಇಂತಹ ಮಕ್ಕಳಿಗೆ ಸಂಘ ಸಂಸ್ಥೆಗಳ ಜತೆಗೆ ಸರ್ಕಾರಗಳು ವಿಶೇಷ ಗಮನ ಹರಿಸಿ ಮುಖ್ಯವಾಹಿನಿಗೆ ತರಲು ಸಹಕಾರ ನೀಡಬೇಕು. ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಮಾಡುತ್ತಿರುವ ಸೇವೆ ಶ್ಲಾಘನೀಯ ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಕುಮಾರಸ್ವಾಮಿ ಫಲಾನುಭವಿಗಳಿಗೆ ಚೆಕ್ ವಿತರಿಸಿದರು. ಕೃಷ್ಣಮೂರ್ತಿ, ಮುಕುಂದೇಗೌಡ, ಹುಲಿರಾಜ ಗುಬ್ಬಿ, ಕೇಶವಪ್ಪ, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...