Janaspandan Trust Shivamogga ಮೇ. 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡುವಂತೆ ಶ್ರೀ ಜನಸ್ಪಂದನ ಟ್ರಸ್ಟ್ ಅಧ್ಯಕ್ಷರಾದ ಚನ್ನಬಸಪ್ಪ(ಮನು) ತಿಳಿಸಿದರು.
ಶಿವಮೊಗ್ಗ ಶ್ರೀ ಜನಸಂದನ ಟ್ರಸ್ಟ್ ವತಿಯಂದ ಮಹಾನಗರ ಪಾಲಿಕೆ ಮತ್ತು ಗಾಂಧಿ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಜಿಲ್ಲೆಯ ವಿವಿಧೆಡೆ ವೈವಿದ್ಯಮಯ ಹಾಗೂ ವಿನೂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮತದಾನ ಮಹತ್ವ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕಳೆದ ಚುನಾವಣೆಗಳಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹೋಲಿಕೆ ಮಾಡಿದಾಗ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ ಎಂದು ಹೇಳಿದರು.
ಶಿವಮೊಗ್ಗ ನಗರ ಪ್ರದೇಶದ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮತದಾನದ ಪ್ರಮಾಣ ಗ್ರಾಮೀಣ ಪ್ರದೇಶದ ಸರಾಸರಿಗಿಂತ ಕಡಿಮೆ ಇರುವ ಕಾರಣದಿಂದ ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಮತದಾನದ ಮಹತ್ವದ ಕುರಿತು ಶ್ರೀ ಜನಸ್ಪಂದನ ಟ್ರಸ್ಟ್ ವತಿಯಿಂದ ಅರಿವು ಮೂಡಿಸಲಾಗುತ್ತಿದೆ.
ಮತದಾನ ನಿಮ್ಮ ಹಕ್ಕು, ತಪ್ಪದೇ ಮತ ಹಾಕಿ, ನಮ್ಮ ಮತ ನಮ್ಮ ಹಕ್ಕು, 18 ವರ್ಷ ತುಂಬಿದ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಶ್ರೇಷ್ಠ ನಾಯಕನನ್ನು ಆಯ್ಕೆ ಮಾಡಿ. ಮತದಾನ ಒಂದು ಶಕ್ತಿ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿ. ಜಾಗೃತ ಮತದಾರ ಸದೃಢ ಪ್ರಜಾಪ್ರಭುತ್ವದ ಬುನಾದಿ, ಕಡ್ಡಾಯ ಮತದಾನದ ಮೂಲಕ ಉತ್ತಮರನ್ನು ಆಯ್ಕೆ ಮಾಡಿ ಎಂದು ತಿಳಿಸಿದರು.
Janaspandan Trust Shivamogga ಕಾರ್ಯಕ್ರಮದಲ್ಲಿ ರಾಘ ಶೆಟ್ಟಿ, ಎನ್.ವಿ.ಸಂದೀಪ್, ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾಧ್ಯಕ್ಷರಾ ಎನ್. ಮಾಲತೇಶ್, ಪೌರಕಾರ್ಮಿಕರ ಉಪಸ್ಥಿತರಿದ್ದರು.