ಗುತ್ತಿಗೆದಾರರಿಂದ ಶೇ.40 ರಷ್ಟು ಲಂಚ ಪಡೆದವರ ಹೆಸರನ್ನು ಗುತ್ತಿಗೆದಾರರ ಸಂಘದವರು ದಾಖಲೆ ಸಮೇತ ಬಹಿರಂಗಪಡಿಸಬೇಕು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಅವರು ತಿಳಿಸಿದ್ದಾರೆ.
ಗುತ್ತಿಗೆದಾರರ ಸಂಘದವರು ದೂರಿನಲ್ಲಿ ಖಚಿತವಾದ ವಿವರಗಳಿಲ್ಲ. ಶೇ.40 ರಷ್ಟು ಲಂಚ ಕೊಡಲಾಗುತ್ತಿದೆ ಎಂಬ ದೂರನ್ನು ಯಾರು ಒಪ್ಪಲಿಕ್ಕೆ ಸಾಧ್ಯವಾಗುವುದಿಲ್ಲ. ನಿಜವಾಗಿಯೂ ಹಣ ಕೊಟ್ಟಿದ್ದರೆ ಗುತ್ತಿಗೆದಾರರೇ ಬಹಿರಂಗಪಡಿಸಲಿ. ಲಂಚ ಪಡೆದಿರುವ ಯಾರೇ ಸಚಿವರಾಗಲಿ ಅವರ ಹೆಸರನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಗುತ್ತಿಗೆದಾರರ ಸಂಘದ ದೂರಿನ ಹಿನ್ನೆಲೆ ಯಾವುದೋ ತಂತ್ರ ಇದ್ದಂತೆ ಕಾಣಿಸುತ್ತಿದೆ. ಈ ಆರೋಪಗಳಿಗೆ ಯಾವುದೇ ಆಧಾರಗಳಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶೇ.10ರಷ್ಟು ಲಂಚ ಪಾವತಿ ಯಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಈಗ ಅದೇ ರೀತಿ ಆರೋಪ ಮಾಡುತ್ತಿರುವ ಬಗ್ಗೆ ಅನುಮಾನ ಇದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.