Thursday, March 19, 2026
Thursday, March 19, 2026

Electronic Media ಚುನಾವಣೆ ಪ್ರಕ್ರಿಯೆಯ 48 ಗಂಟೆ ಮುಂಚಿತ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಚಾರ ನಿಲ್ಲಿಸಬೇಕು

Date:

Electronic Media ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಮೇ 10 ರಂದು ನಡೆಯಲಿದೆ.ಈ ಹಿನ್ನೆಲೆಯಲ್ಲಿ
ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮೆಟೊಗ್ರಾಫ್, ದೃಶ್ಯ, ಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 120 ರ ಪ್ರಕಾರ ನಿಷೇಧಿಸಲಾಗಿದೆ.

ಚುನಾವಣಾ ಸಂಬಂಧಿ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ.

ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ 02 ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.

ಟಿವಿ/ರೇಡಿಯೋ/ಕೇಬಲ್ ನೆಟ್‍ವರ್ಕ್ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನ ಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳ ಪ್ರಸಾರ ಮಾಡದಂತೆ ಕ್ರಮ ವಹಿಸಬೇಕು.

Electronic Media ಕಾರ್ಯಕ್ರಮದಲ್ಲಿ ಭಾಗವಹಿಸುವವರು(ಪ್ಯಾನಲ್ ಲಿಸ್ಟ್)ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು.

ನಿಗದಿತ 48 ಗಂಟೆಗಳ ಅವಧಿಯಲ್ಲಿ ಒಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು, ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು, ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ 1951 ರ ಕಲಂ 120 ರ ವ್ಯಾಪ್ತಿಯಲ್ಲಿ ಬರುತ್ತದೆ.

ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಅಂಗವಾಗಿ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದ್ದರಿಂದ ಎಲ್ಲಾ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳು ಮೇ 08 ರ ಸಂಜೆ 6 ಗಂಟೆಯಿಂದ ಮೇ 10 ರ ಸಂಜೆ 6.30 ರವರೆಗೆ ಮೇಲ್ಕಂಡ ನಿರ್ದೇಶನಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...