Sunday, May 3, 2026
Sunday, May 3, 2026

JCI Shivamogga Sahyadri Institute ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಪೌರ ಕಾರ್ಮಿಕರ ಕೊಡುಗೆ ಅಪಾರ- ಸುಷ್ಮಾ ಹಿರೇಮಠ್

Date:

JCI Shivamogga Sahyadri Institute ಸಮಾಜದ ಸದೃಢವಾಗಿ ರೂಪುಗೊಳ್ಳುವಲ್ಲಿ ಅನೇಕರು ವಿವಿಧ ವೃತ್ತಿಗಳಲ್ಲಿ ಸದ್ದಿಲ್ಲದೇ ಸೇವೆ ಸಲ್ಲಿಸುತ್ತಿದ್ದಾರೆ. ಉತ್ತಮ ಸಮಾಜ ನಿರ್ಮಾಣಕ್ಕಾಗಿ ಪೌರ ಕಾರ್ಮಿಕರ ಕೊಡುಗೆಯು ಮಹತ್ತರವಾಗಿದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಅಧ್ಯಕ್ಷೆ ಸುಷ್ಮಾ ಹಿರೇಮಠ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ವತಿಯಿಂದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರಸಭಾ ಪೌರಕಾರ್ಮಿಕರಿಗೆ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಗೌರವ ನೀಡಿ ಸನ್ಮಾನಿಸಿ ಮಾತನಾಡಿದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯು ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಕಾರ್ಯಕ್ರಮದ ಅಡಿಯಲ್ಲಿ ಪೊಲೀಸ್ ಇಲಾಖೆ, ಕೆಇಬಿ ಇಲಾಖೆ ಹಾಗೂ ಪುರಸಭಾ ಇಲಾಖೆ ಸೇರಿದಂತೆ ವಿವಿಧ ವೃತ್ತಿಗಳಲ್ಲಿ ಸಾರ್ವಜನಿಕರಿಗೆ ಅನುಕೂಲ ವಾಗುವಂತಹ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಗುರುತಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.

ಜೆಸಿಐ ಸಂಸ್ಥೆಯು ಹೀಗೆ ಅನೇಕ ಸಾರ್ವಜನಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವುದು ನಮಗೆ ಹೆಮ್ಮೆಯ ವಿಷಯವಾಗಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆ ಎಂದರು.

JCI Shivamogga Sahyadri Institute ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯು ಕಾರ್ಮಿಕರ ದಿನಾಚರಣೆ ಪ್ರಯುಕ್ತ ನಗರಸಭಾ ಪೌರಕಾರ್ಮಿಕರಾದ ಮಂಜುಳಮ್ಮ ಹಾಗೂ ನಟರಾಜ್ ಅವರನ್ನು ನಗರದ ಪೊಲೀಸ್ ಚೌಕಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಮಾಜಿ ಸಹಾಯಕ ಗವರ್ನರ್ ವಿಜಯಕುಮಾರ್, ಜೆ ಸಿ ಐ ವಲಯ ಉಪಾಧ್ಯಕ್ಷ ಸತೀಶ್ ಚಂದ್ರ, ಕಿಶೋರ್ ಕುಮಾರ್, ಮಂಜುನಾಥ್ ಕದಂ, ವೆಂಕಟೇಶ್ ಗೌಡ, ನಾಗರಾಜ್, ಮುಕುಂದೇಗೌಡ, ವಿದ್ಯಾ, ಸ್ವಪ್ನ ಬದ್ರಿನಾಥ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...