Monday, February 2, 2026
Monday, February 2, 2026

Animal Husbandry Shivamogga ಜಿಲ್ಲೆಯಲ್ಲಿ ಜಾನುವಾರು ಕಂದುರೋಗ ನಿಯಂತ್ರಣಾ ಕಾರ್ಯಕ್ರಮ

Date:

Animal Husbandry Shivamogga ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದುರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಕಂದುರೋಗವು ಪ್ರಾಣಿಜನ್ಯರೋಗವಾಗಿದ್ದು, ರಾಸುಗಳಲ್ಲಿ ಈ ರೋಗದಿಂದ ಗರ್ಭ ಧರಿಸಿದ ಹಸುಗಳು 6 ತಿಂಗಳ ನಂತರ ಕಂದು ಹಾಕಬಹುದು. ಅವುಗಳ ಗರ್ಭ ಸ್ರಾವದಿಂದ ಮತ್ತು ಹಸಿ ಹಾಲನ್ನು ಹಾಗೆಯೇ ಉಪಯೋಗಿಸುವುದರಿಂದ ರೋಗವು ಮನುಷ್ಯರಿಗೂ ಹರಡಬಹುದು. ಸದರಿ ರೋಗವು ಮನುಷ್ಯರಿಗೆ ಬಂದರೆ ಸಂತಾನೋತ್ಪತ್ತಿ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ.

ಕಾರಣ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಅರ್ಹ ಕರುಗಳಿಗೆ ಲಸಿಕೆ ಹಾಕಿಸಿ, ಸಂಭವಿಸಬಹುದಾದಆರ್ಥಿಕ ನಷ್ಟ ತಪ್ಪಿಸಿ ನಿಮ್ಮ ಜಾನುವಾರುಗಳನ್ನೂ ರಕ್ಷಿಸಿಕೊಳ್ಳಲು ಕೋರಿದೆ.

Animal Husbandry Shivamogga ಜಿಲ್ಲೆಯಲ್ಲಿ ಸದರಿ ಲಸಿಕಾ ಕಾರ್ಯಕ್ರಮದಡಿ4 ರಿಂದ 8 ತಿಂಗಳ ಆಕಳು/ಎಮ್ಮೆಗಳ ಹೆಣ್ಣು ಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ದಿನಾಂಕ: 15-05-2023 ರಿಂದ 30-05-2023ರವರೆಗೆ ಲಸಿಕೆಯನ್ನು ಹಾಕಲಾಗುವುದು.

2023-24 ನೇ ಸಾಲಿನಲ್ಲಿವಾರ್ಷಿಕಒಟ್ಟು 75000 ಅರ್ಹ ಹೆಣ್ಣುಕರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಈ ಸುತ್ತಿನಲ್ಲಿ 25000 ಅರ್ಹ ಹೆಣ್ಣು ಕರುಗಳಿಗೆ ಲಸಿಕೆಯನ್ನು ಹಾಕಲಾಗುವುದು. ಜಿಲ್ಲೆಯಎಲ್ಲಾರೈತ ಬಾಂದವರು ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಗಿದೆ.

ಲಸಿಕಾದಾರರು ತಮ್ಮ ಮನೆ ಬಾಗಿಲಲ್ಲೇ ತಮ್ಮ ಕರುಗಳಿಗೆ ಕಿವಿಯೋಲೆ ಅಳವಡಿಸಿ ನೊಂದಣಿ ಮಾಡಿಕೊಂಡು ಲಸಿಕೆ ಹಾಕುತ್ತಾರೆ. ಎಲ್ಲಾ ರೈತ ಬಾಂಧವರು ಮತ್ತು ಪಶು ಪಾಲಕರು ತಮ್ಮಲ್ಲಿರುವ ಅರ್ಹ ಹೆಣ್ಣು ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಕಂದುರೋಗವನ್ನು ನಿಯಂತ್ರಿಸುವಲ್ಲಿ ಸಹಕರಿಸುವುದು.

ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಾಲ್ಲೂಕುವಾರು ಗ್ರಾಮವಾರುತಯಾರಿಸಲಾಗಿದ್ದು, ಪಶುಪಾಲನಾ ಇಲಾಖೆಯಅಧಿಕಾರಿ/ಸಿಬ್ಬಂದಿಯನ್ನೊಳಗೊಂಡ ಲಸಿಕಾ ತಂಡಗಳು ವೇಳಾಪಟ್ಟಿಯಂತೆ ಆಯಾ ಗ್ರಾಮಗಳಿಗೆ ಬೇಟಿ ನೀಡಿ ಜಾನುವಾರುಗಳಿಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶು ಚಿಕಿತ್ಸಾ ಸಂಸ್ಥೆಗಳನ್ನು ಸಂಪರ್ಕಿಸಬೇಕೆಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಶಿವಯೋಗಿ.ಬಿ.ಯಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...