Saturday, December 6, 2025
Saturday, December 6, 2025

K. S. Eshwarappa ಬೆದರಿಕೆ ಕರೆ ಬಗ್ಗೆ ಮಾಜಿ ಶಾಸಕ ಈಶ್ವರಪ್ಪ ದೂರು ಸಲ್ಲಿಕೆ

Date:

K. S. Eshwarappa ಕಜಕಿಸ್ತಾನ್ ನಿಂದ ಮೇ.14 ಮಧ್ಯರಾತ್ರಿ ಮಿಸ್ ಕಾಲ್ ಕರೆಯೊಂದು ಮಾಜಿ ಶಾಸಕ ಕೆ ಎಸ್ ಈಶ್ವರಪ್ಪ ಅವರಿಗೆ ಬಂದಿದೆ. ಈ ಕರೆ ಉಗ್ರರ ಕರೆಯಾಗಿರುವ ಸಾಧ್ಯತೆ ಇದೆ. ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಈಶ್ವರಪ್ಪ ಆದ್ರೂ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರಿಗೆ ದೂರು ಸಲ್ಲಿಸಿದ್ದಾರೆ.

K. S. Eshwarappa ಪಿ ಎಫ್ ಐ ಸಂಘಟನೆಗೆ ಸೇರಿದ ಜಯೇಶ್ ಪೂಜಾರಿ ಅಲಿಯಾಸ್ ಶಾಹಿರ್ ಶೇಕ್ ಎಂಬಾತ ನನ್ನನ್ನು ಹತ್ಯೆ ಮಾಡಲು ಸಂಚುರೂಪಿಸಿದ್ದ ಎಂಬುವುದು ಮಹಾರಾಷ್ಟ್ರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇದಕ್ಕೆ ಪೂರಕವಾಗಿ ಮೇ 14ರಂದು ಮಧ್ಯರಾತ್ರಿ 12 ಗಂಟೆಗೆ ಅನಾಮ ದೇವಿಯ ಕರೆಯೊಂದು ಬಂದಿದೆ. ಈ ಕರೆಯನ್ನು ಸ್ವೀಕರಿಸದ ಕಾರಣ ಅವರ ವಿವರಗಳು ಲಭ್ಯವಾಗಿಲ್ಲ. ಆದರೆ ಕರೆಯು ಕಜಕಿಸ್ತಾನ್ ನಿಂದ ಬಂದಿದೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಹಿಂದೆ ಸಹ ಉಗ್ರ ಸಂಘಟನೆಗಳಿಂದ ಏಳೆಂಟು ಬಾರಿ ಕರೆ ಬಂದಿದೆ. ಇದು ಸಹ ಉಗ್ರ ಸಂಘಟನೆಗಳ ಕೈವಾಡ ಇರುವ ಸಾಧ್ಯತೆ ಇದೆ. ಆದ್ದರಿಂದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...