Admissions Open For Diploma Courses At JSS PDA ಮೈಸೂರು ಜೆ.ಎಸ್.ಎಸ್. ಮಹಾವಿದ್ಯಾಪೀಠ, ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ ಮೂರು ವರ್ಷಗಳ ವಿವಿಧ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಕ್ಕೆ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಜರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್ ಹಾಗೂ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಕಂಪ್ಯೂಟರ್ ಅಪ್ಲಿಕೇಷನ್ಸ್ ಹಾಗೂ ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಿಜಿ ಕೋರ್ಸುಗಳಿಗೆ ಕರ್ನಾಟಕ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35% ಅಂಕಗಳೊಂದಿಗೆ ತೇರ್ಗಡೆ ಹಾಗೂ 40% ಮತ್ತು ಮೇಲ್ಪಟ್ಟು ಮೂಳೆ ಮತ್ತು ಕೀಲು ಅಂಗವಿಕಲತೆ , 60ಡಿಬಿ ಮತ್ತು ಮೇಲ್ಪಟ್ಟು ಕಿವುಡು ಮತ್ತು ಮೂಗು ಅಂಗವಿಕಲತೆ ಹಾಗೂ ಭಾಗಶಃ ಮತ್ತು ಪೂರ್ಣ ಅಂಧತ್ವ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರಬೇಕು.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ.
ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ.
Admissions Open For Diploma Courses At JSS PDA ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.
ಪ್ರವೇಶಕ್ಕೆ ಅರ್ಜಿಗಳನ್ನು ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು- 570006 ಇಲ್ಲಿಗೆ (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. ೧೦೦/- ಹಾಗೂ ಎಸ್‌ಸಿ/ಎಸ್‌ಟಿ/ಸಿ-೧ ವರ್ಗದವರಿಗೆ ರೂ. ೫೦/-) ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಅಥವಾ ವೆಬ್‌ಸೈಟ್ www.jsspda.org ಮೂಲಕ ಡೌನ್‌ಲೋಡು ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ದಿ: 17-6-2023 ರೊಳಗಾಗಿ ಕಚೇರಿಗೆ ತಲುಪಿಸುವಂತೆ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ಹಾಗು ಮೊ.ಸಂ.: 9844644937ನ್ನು ಸಂಪರ್ಕಿಸುವುದು.