Karnataka CM Oath Ceremony ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೃಹತ್ ಮಟ್ಟದ ಜನಸಾಗರದ ಮಧ್ಯೆ ರಾಜ್ಯದ ಮುಖ್ಯಮಂತ್ರಿ ಆಗಿ ಎರಡನೇ ಪರ್ವ ಆರಂಭಿಸಿದ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನೆಲ್ಲೆ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುನ್ನಡೆ ಬರೆದಿದ್ದಾರೆ.
ನೆರೆದ ಜನಸ್ತೋಮವನ್ನ ಉದ್ದೇಶಿಸಿ ಎಐಸಿಸಿ ನಾಯಕರ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಕಡೆಗೆ ಸತ್ಯವಿತ್ತು ಬಡ ಜನರಿದ್ದರು. ಬಿಜೆಪಿ ನಾಯಕರ ಬಳಿ ಹಣ, ಅಧಿಕಾರ, ಪೋಲಿಸ್ ಅಧಿಕಾರಿಗಳು ಎಲ್ಲವೂ ಇತ್ತು. ಆದರೆ ಅಂತಿಮವಾಗಿ ಗೆದ್ದದ್ದು ಸತ್ಯ. ಭ್ರಷ್ಟರು ಮತ್ತು ದ್ವೇಷವನ್ನು ರಾಜ್ಯದ ಜನ ಹೊಡೆದೋಡಿಸಿ ಪ್ರೀತಿ ಸಾಮರಸ್ಯಕ್ಕೆ ಗೆಲುವು ತಂದುಕೊಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ.
ಐದು ವರ್ಷಗಳಲ್ಲಿ ಜನರು ಭ್ರಷ್ಟಾಚಾರ ನೋಡಿದ್ದಾರೆ.ಇನ್ನೂ ಅದಕ್ಕೆ ಅವಕಾಶವಿಲ್ಲ. ಭ್ರಷ್ಟಾಚಾರ ಮುಕ್ತ ಸರ್ಕಾರದ ವಾಗ್ದಾನ ನೀಡುತ್ತೇವೆ ಎಂದು ಹೇಳಿದ್ದಾರೆ.
ಎ ಐ ಸಿ ಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ರಾಜ್ಯದಲ್ಲಿ ದ್ವೇಷ ಕಿತ್ತೊಗೆದು ಪ್ರೀತಿ, ಸೌಹಾರ್ದ, ವಾತಾವರಣ ಮೂಡಿಸುತ್ತೇವೆ. ನಾವು ಬಿಜೆಪಿ ರೀತಿ ಹೇಳುವುದೊಂದು ನಡೆಯುವುದೊಂದು ಮಾಡೋದಿಲ್ಲ ಎಂದು ಹೇಳಿದ್ದಾರೆ.
Karnataka CM Oath Ceremony ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯದ ಜನ ಬದಲಾವಣೆ ಬಯಸಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ. ನೀಡಿರುವ ಭರವಸೆ, ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಪ್ರಣಾಳಿಕೆಯ ಎಲ್ಲಾ ಅಂಶಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.