Thursday, March 19, 2026
Thursday, March 19, 2026

Health Awareness ಮಕ್ಕಳ ಮನಸ್ಸಿನಲ್ಲಿ ಸಕಾರಾತ್ಮಕ ವಿಚಾರಗಳನ್ನ ಬೆಳೆಸಬೇಕು- ಡಾ.ಎಸ್.ಟಿ.ಅರವಿಂದ್

Date:

Health awareness ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಆಗಿದ್ದು, ಸಕರಾತ್ಮಕ ವಿಷಯಗಳನ್ನು ಮಕ್ಕಳ ಮನಸ್ಸಿನಲ್ಲಿ ಬೆಳೆಸಬೇಕು. ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮುಖ್ಯ ಆಗಿರುತ್ತದೆ ಎಂದು ಮನೋವೈದ್ಯ ಡಾ. ಎಸ್.ಟಿ.ಅರವಿಂದ್ ಹೇಳಿದರು.

ಶಿವಮೊಗ್ಗದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಹಾಗೂ ರೋಟರಿ ಮಿಡ್‌ಟೌನ್ ವತಿಯಿಂದ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಮಕ್ಕಳ ಮನಸ್ಸಿನ ಭಾವನೆಗಳನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕು. ಅವರ ಭಾವನೆಗಳನ್ನು ಅರಿತು ಹೆಚ್ಚು ಸಮಯವನ್ನು ಮೀಸಲಿಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜತೆಯಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಬೇಕು. ವ್ಯಾಯಾಮ, ಆರೋಗ್ಯಕರ ಚಟುವಟಿಕೆಗಳನ್ನು ಮಕ್ಕಳಿಗೆ ಕಲಿಸಬೇಕು ಎಂದು ತಿಳಿಸಿದರು.

ಇತ್ತೀಚೆಗೆ ಮಕ್ಕಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ. ಆತ್ಮಸ್ಥೈರ್ಯ ಕೊರತೆ ಕಾಣುತ್ತಿದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕು. ಎಂತಹ ಸಂದರ್ಭಗಳೇ ಎದುರಾದರೂ ಧೈರ್ಯದಿಂದ ಎದುರಿಸುವ ಸಕರಾತ್ಮಕ ಮನೋಭಾವ ಬೆಳೆಸಬೇಕು ಎಂದು ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಕುಮಾರಸ್ವಾಮಿ ಹಾಗೂ ರೋಟರಿ ಮಿಡ್‌ಟೌನ್ ಶಿವಮೊಗ್ಗ ಅಧ್ಯಕ್ಷೆ ವೀಣಾ ಸುರೇಶ್ ಅವರು ಮನೋವೈದ್ಯ ಡಾ. ಎಸ್.ಟಿ.ಅರವಿಂದ್ ಅವರನ್ನು ಸನ್ಮಾನಿಸಿದರು.

ಆರೋಗ್ಯ ಜಾಗೃತಿ ಕಾರ್ಯಕ್ರಮದ ನಂತರ ಸದಸ್ಯರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

Health awareness ಸದಸ್ಯರ ಪ್ರಶ್ನೆಗಳಿಗೆ ಸೂಕ್ತ ವಿಷಯಗಳೊಂದಿಗೆ ಅರವಿಂದ್ ಅವರು ಉತ್ತರಿಸಿದರು. ವೇದಿಕೆಯಲ್ಲಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕುಮಾರಸ್ವಾಮಿ, ಮುರಳಿ, ಜಗನ್ನಾಥ್, ಉಮಾ ಅಮರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...