Thursday, December 18, 2025
Thursday, December 18, 2025

Do not re-induct those who left the Congress party ಕಾಂಗ್ರೆಸ್ ಪಕ್ಷ ತೊರೆದವರನ್ನ ಮತ್ತೆ ಸೇರಿಸಿಕೊಳ್ಳಬೇಡಿ-ಮಧುಕುಮಾರ್

Date:

Do not re-induct those who left the Congress party ಕಾಂಗ್ರೆಸ್ ತೊರೆದು ಇತ್ತೀಚೆಗೆ ಜೆಡಿಎಸ್ ಸೇರ್ಪಡೆಯಾಗಿದ್ದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಶಿವಮೊಗ್ಗ ಜಿಲ್ಲಾ ಕಾರ್ಮಿಕ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಮಧುಕುಮಾರ್.ಜಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ದೀಪಕ್ ಸಿಂಗ್ ಮತ್ತಿತರರು ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ, ಶಿವಮೊಗ್ಗ ನಗರದಲ್ಲಿ ಜೆಡಿಎಸ್ ಅಭ್ರ‍್ಥಿ ಸೋಲುತ್ತಿದ್ದಂತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೀಗ ಪುನಃ ಇವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಹಿಂದಿರುಗಲು ಪ್ರಯತ್ನಿಸುತ್ತಿದೆ. ಇವರಿಗೆ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು ಎಂದು ಮಧು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಕೆ.ಬಿ.ಪ್ರಸನ್ನಕುಮಾರ್ ಅವರನ್ನು ಶಾಸಕರನ್ನಾಗಿ ಮಾಡಿತ್ತು. ಅಲ್ಲದೇ, ಮತ್ತೊಂದು ಬಾರಿಯೂ ಚುನಾವಣೆಯಲ್ಲಿ ಸ್ರ‍್ಧಿಸಲು ಅವಕಾಶ ಮಾಡಿಕೊಟ್ಟಿತ್ತು. ಆದರೆ ಚುನಾವಣೆಯಲ್ಲಿ ಬಾರಿ ಅಂತರದಲ್ಲಿ ಸೋಲು ಅನುಭವಿಸಿದ ಕಾರಣಕ್ಕಾಗಿ ಈ ಬಾರಿ ಎಚ್.ಸಿ.ಯೋಗೀಶ್ ಅವರಿಗೆ ಪಕ್ಷ ಅವಕಾಶ ಮಾಡಿಕೊಟ್ಟಿತ್ತು. ಇದನ್ನು ಸಹಿಸಲು ಆಗದ ಪ್ರಸನ್ನಕುಮಾರ್ ಅವರು ಯೋಗೀಶ್ ಅವರನ್ನು ಸೋಲಿಸಲೆಂದೇ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು ಎಂದು ಅವರು ತಿಳಿಸಿದ್ದಾರೆ.

Do not re-induct those who left the Congress party ಕೆ.ಬಿ.ಪ್ರಸನ್ನಕುಮಾರ್ ಮತ್ತವರ ತಂಡ ಇದೀಗ ತಮ್ಮ ಅಸ್ತಿತ್ವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ತಮಗೆ ಭವಿಷ್ಯವಿಲ್ಲ ಎಂಬುದು ಅರಿವಾಗುತ್ತಿದ್ದಂತೆ ಮರಳಿ ಕಾಂಗ್ರೆಸ್ಗೆ ಬರಲು ಪ್ರಯತ್ನ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಕಾಂಗ್ರೆಸ್ ಅಭ್ರ‍್ಥಿಯನ್ನು ಸೋಲಿಸಲೆಂದೇ ಜೆಡಿಎಸ್ ಪಕ್ಷಕ್ಕೆ ಹೋಗಿದ್ದ ಇವರನ್ನು ಪುನಃ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡರೇ ಇಲ್ಲಿನ ನಿಷ್ಟಾವಂತ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ನೋವುಂಟಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...