CM Siddaramaiah ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ, ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರು ಅಧಿಕಾರಿಗಳಿಗೆ
ಸೂಚಿಸಿದರು.
ಜಿಲ್ಲಾಧಿಕಾರಿಗಳು, ಸಿಈಓ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಬೇಕು ಕಾರಣ ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ಹೇಳಿದರು.
ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ.
ಯಾವುದೇ ಕಾರಣಕ್ಕೂ ಕರ್ತವ್ಯಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇನೆ. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಲೋಪ ಆಗಬಾರದು.
CM Siddaramaiah ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆನ್ ಲೈನ್ ಮೂಲಕ ನಡೆಸಿದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಖಡಕ್ ಸೂಚನೆ ನೀಡಿದರು.