Thursday, June 18, 2026
Thursday, June 18, 2026

H. D. Kumaraswamy ಗ್ಯಾರಂಟಿ ವಿಫಲತೆಯನ್ನೇ ಅಸ್ತ್ರ ಮಾಡಿ ಅಂದೋಳನ ಮಾಡಿ-ಎಚ್.ಡಿ.ಕುಮಾರಸ್ವಾಮಿ

Date:

H. D. Kumaraswamy ಗ್ಯಾರೆಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಷರತ್ತು ವಿಧಿಸಲು ಹೊರಟಿದೆ. ಈಗ ನಾವು ಜನರ ಜೊತೆ ನಿಲ್ಲಬೇಕು. ಜನರೇ ಆಂದೋಲನಕ್ಕೆ ಧುಮುಕುವಂತೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಅವರು ಪಕ್ಷದ ಮುಖಂಡರಿಗೆ ಸೂಚಿಸಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಕುರಿತು ಪರಾಮರ್ಶೆ ನಡೆಸಲು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಅವರು ಮಾತನಾಡಿದರು.

ನನಗೂ ಉಚಿತ, ನಿಮಗೂ ಉಚಿತ ಎಂದು ಕಾಂಗ್ರೆಸ್ ನಾಯಕರು ಚುನಾವಣೆ ಪ್ರಚಾರದಲ್ಲಿ ಭರವಸೆ ನೀಡುತ್ತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗ ಹೇಳಿದ್ದೇನು…? ಈಗ ಮಾಡುತ್ತಿರುವುದೇನು? ಇದನ್ನು ನಾವು ಜನರ ಮುಂದಿಡಬೇಕು ಎಂದು ಹೇಳಿದರು.

H. D. Kumaraswamy ಈ ಸಂದರ್ಭದಲ್ಲಿ ಜೆಡಿಎಸ್ ನ ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಮತ್ತು ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...